ಜನತೆಗೆ ಸಿಹಿ ಸುದ್ದಿ- ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ

Public TV
1 Min Read

ನವದೆಹಲಿ:  ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ (LPG Price Cut) 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ (Cabinet) ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ.

ಇದೇ ವೇಳೆ ಸಬ್ಸಿಡಿಯನ್ನು ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗುತ್ತದೆಯೇ ಅಥವಾ ಸಿಲಿಂಡರ್ ಬೆಲೆಯಲ್ಲಿ ಫ್ಲಾಟ್ ರಿಯಾಯಿತಿಯನ್ನು ನೀಡಲಾಗುತ್ತದೆಯೇ ಎಂದು ಉತ್ತರಿಸಲು ಠಾಕೂರ್ ನಿರಾಕರಿಸಿದ್ದಾರೆ. ಆಗಸ್ಟ್‌ 30 ರಿಂದ ಖರೀದಿಸುವ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸಬ್ಸಿಡಿ ಸಿಗಲಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನ ಯಾವಾಗ? – ಕಾಲಮಿತಿ ತಿಳಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ. ದೇಶದ ಎಲ್ಲಾ 33 ಕೋಟಿ ಎಲ್‌ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂದಾಗಿ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 10,000 ಕೋಟಿ ರೂ ಹೊರೆಯಾಗಲಿದ್ದು ಈ ವರ್ಷಕ್ಕೆ 7,680 ಕೋಟಿ ರೂ. ಹೊರೆ ಆಗಲಿದೆ ಎಂದು ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದರೊಂದಿಗೆ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 200 ಸಬ್ಸಿಡಿ ಸಿಗಲಿದೆ. ಹೀಗಾಗಿ ಈ ಯೋಜನೆಯ ಫಲಾನುಭವಿಗಳಿಗೆ ಒಂದು ಸಿಲಿಂಡರ್‌ಗೆ 400 ರೂ. ಸಬ್ಸಿಡಿ ಸಿಕ್ಕಿದಂತಾಗುತ್ತದೆ.

ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್‌ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್