ಪಾಕಿಸ್ತಾನದ ಇತಿಹಾಸದಲ್ಲೇ 300 ರೂ. ದಾಟಿದ ಪೆಟ್ರೋಲ್ ಬೆಲೆ

By
1 Min Read

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ (Pakistan) ಗಗನಕ್ಕೇರುತ್ತಿರುವ ವಿದ್ಯುತ್ ಶುಲ್ಕದ ಆಕ್ರೋಶದ ನಡುವೆಯೇ ದೇಶದಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್‌ನ (Diesel) ಬೆಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೀಟರ್‌ಗೆ 300 ಪಾಕಿಸ್ತಾನ ರೂಪಾಯಿ ದಾಟಿದೆ.

ಪ್ರಧಾನಮಂತ್ರಿ ಅನ್ವಾರುಲ್ ಹಕ್ ಕಾಕರ್ ನೇತೃತ್ವದ ಉಸ್ತುವಾರಿ ಸರ್ಕಾರ ಗುರುವಾರ ಪೆಟ್ರೋಲ್ ಅನ್ನು ಲೀಟರ್‌ಗೆ 14.91 ರೂ. ಹಾಗೂ ಹೈಸ್ಪೀಡ್ ಡೀಸೆಲ್ (HSD) ಬೆಲೆಯನ್ನು 18.55 ರೂ.ಯಷ್ಟು ಹೆಚ್ಚಿಸಿದೆ. ಇದು ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿರುವ ಪಾಕ್ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ

ಪಾಕಿಸ್ತಾನದಲ್ಲಿ ಬೆಲೆ ಏರಿಕೆಗಳಿಂದಾಗಿ ಇದೀಗ ಪೆಟ್ರೋಲ್ ಬೆಲೆ 305.36 ರೂ.ಗೆ ತಲುಪಿದೆ. ಡೀಸೆಲ್ ಬೆಲೆ 311 ರೂ. ಆಗಿದೆ. ಇದನ್ನೂ ಓದಿ: One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

ದೇಶದಲ್ಲಿ ಇತ್ತೀಚೆಗೆ ವಿದ್ಯುತ್ ಬಿಲ್‌ನಲ್ಲಿ ಶುಲ್ಕ ಹೆಚ್ಚಳವಾಗುತ್ತಿರುವ ಹಿನ್ನೆಲೆ ಜನರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆನೇಕ ಕಡೆ ಬೃಹತ್ ಮೆರವಣಿಗೆ ನಡೆಸಿ ವಿದ್ಯುತ್ ಬಿಲ್‌ಗಳನ್ನು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದರೂ ಇನ್ನೂ ಪರಿಹಾರ ಸಿಕ್ಕಿಲ್ಲ. ಇದನ್ನೂ ಓದಿ: ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್