Photo Album:ಕಿಚ್ಚ@50: ಹುಟ್ಟುಹಬ್ಬದ ಫೋಟೋ ಆಲ್ಬಂ

Public TV
2 Min Read

ನಿನ್ನೆ ಮಧ್ಯರಾತ್ರಿಯಿಂದಲೇ ಕಿಚ್ಚ ಸುದೀಪ್ ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು.

ಕರ್ನಾಟಕದ ನಾನಾ ಜಿಲ್ಲೆಗಳಿಂದ ಕಿಚ್ಚನ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ನೆಚ್ಚಿನ ನಟನಿಗೆ ಶುಭಾಶಯ ಹೇಳುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿದರು.

ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದ್ರು.

ಅಭಿಮಾನಿಗಳಿಗೆ ಸರ್ ಪ್ರೈಸ್ ಕಾದಿದೆ ಎಂದಿದ್ದ ಪತ್ನಿ ಡ್ರೋಣ್ ಲೈಟಿಂಗ್ ಮೂಲಕ ಪತಿಗೆ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್‌ವುಡ್ (Sandalwood) ಹೀರೋ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.

ಹಲವು ದಿನಗಳಿಂದ ಕಿಚ್ಚನ ಅಭಿಮಾನಿಗಳು ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುದೀಪ್ ಅವರ 46ನೇ ಚಿತ್ರಕ್ಕೆ ಹೊಸ ಬಗೆಯ ಟೈಟಲ್ ಇಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಟೈಟಲ್ ಅನಾವರಣಕ್ಕಾಗಿಯೇ ಟೀಸರ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಇದೀಗ ಆ ಕೆಲಸವನ್ನು ಚಿತ್ರತಂಡ ಮಾಡಿದೆ. ಕಿಚ್ಚ 46 ಚಿತ್ರಕ್ಕೆ ಮ್ಯಾಕ್ಸ್ ಎಂದು ಹೆಸರಿಡಲಾಗಿದೆ.

ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ಸುದೀಪ್ ಅವರು ಬೆಸ್ಟ್ ನಟ ಮಾತ್ರವಲ್ಲ, ದಿ ಬೆಸ್ಟ್ ಡೈರೆಕ್ಟರ್ ಅನ್ನೋದನ್ನ ಈಗಾಗಲೇ ಪ್ರೂವ್ ಮಾಡಿದ್ದಾರೆ. ಕೆಂಪೇಗೌಡ, ಮಾಣಿಕ್ಯ, ಮೈ ಆಟೋಗ್ರಾಫ್ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಸಿಹಿಸುದ್ದಿ ನೀಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್