ಮಾಲ್ಡೀವ್ಸ್ ನಲ್ಲಿ ವೈನ್ ಗ್ಲಾಸ್ ಜೊತೆ ಕಾಣಿಸಿಕೊಂಡ ಸೋನು ಗೌಡ

Public TV
2 Min Read

ಮಾಜಿ ಟಿಕ್ ಟಾಕ್ ಸ್ಟಾರ್, ಮಾಜಿ ಬಿಗ್ ಬಾಸ್ (Bigg Boss) ಸ್ಪರ್ಧಿ ಸೋನು ಶ್ರೀನಿವಾಸಗೌಡ (Sonu Srinivas Gowda) ಮೊನ್ನೆಯಷ್ಟೇ ವಿಡಿಯೋ ಮಾಡಿ ಕಣ್ಣೀರು ಹಾಕಿದ್ದರು. ತಮ್ಮನ್ನು ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡುತ್ತಿರುವ ವಿಷಯವನ್ನು ಹಂಚಿಕೊಂಡಿದ್ದ ಅವರು, ನನ್ನ ಕುಟುಂಬಕ್ಕೆ ನೋವು ಕೊಡಬೇಡಿ ಎಂದು ಕಣ್ಣೀರಿಟ್ಟಿದ್ದರು. ಟ್ರೋಲ್ ಗಳ ಬಗ್ಗೆ ತುಂಬಾ ನೊಂದುಕೊಂಡಿದ್ದ ಸೋನು, ಇದೀಗ ವಿದೇಶಕ್ಕೆ ಹಾರಿದ್ದಾರೆ.

ತಾವು ವಿದೇಶಕ್ಕೆ ಹಾರಿರುವ ವಿಚಾರವನ್ನು ಸ್ವತಃ ಸೋನು ಗೌಡ ಅವರೇ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಹೇಳಿಕೊಂಡಿದ್ದಾರೆ. ಕೈಯಲ್ಲಿ ವೈನ್ ಗ್ಲಾಸ್ (Wine Glass) ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿರುವ ಸೋನು, ಬಿಂದಾಸ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಗಳಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ.

ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.

ಈ ಹಿಂದೆ ಇವರ ಕೆಲ ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.

ಕಂಪನಿಯೊಂದರ ಜಾಹೀರಾತಿಗೆ ಸೋನು ಗೌಡ ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.

 

ಟಿಕ್‌ ಟಾಕ್ ರೀಲ್ಸ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ (Bigg Boss Ott) ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು. ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ಸಾನ್ಯ ಅಯ್ಯರ್ ಜೊತೆ ಸೋನು ಮಿಂಚಿದ್ದರು. ದೊಡ್ಮನೆ ಆಟ ಮುಗಿದ ಮೇಲೆ ತಮ್ಮ ಯುಟ್ಯೂಬ್‌ನಲ್ಲಿ ಒಂದಲ್ಲಾ ಒಂದು ವಿಚಾರದೊಂದಿಗೆ ಚರ್ಚೆ ಮಾಡುತ್ತಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್