ಮಹಿಳೆಯ ಮೇಲೆ ಅತ್ಯಾಚಾರ ಆರೋಪ- ತೆಲಂಗಾಣ ಕಾಂಗ್ರೆಸ್ ನಾಯಕನಿಗೆ ನೋಟಿಸ್

By
1 Min Read

ಬೆಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ (Rape) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ (Telangana) ಕಾಂಗ್ರೆಸ್ (Congress) ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿಗೆ (Kumbam Shivakumar Reddy) ಕಬ್ಬನ್ ಪಾರ್ಕ್ (Cubbon Park) ಪೊಲೀಸರು ನೋಟಿಸ್ ನೀಡಿದ್ದಾರೆ.

ವಾಟ್ಸಪ್ ಮೂಲಕ ಶಿವಕುಮಾರ್ ರೆಡ್ಡಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ (Notice) ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಈ ಕುರಿತು ಕುಂಭಂ ಶಿವಕುಮಾರ್ ರೆಡ್ಡಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯಾವಕಾಶವನ್ನು ಕೇಳಿದ್ದಾರೆ. ಇದನ್ನೂ ಓದಿ: ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ

ಕುಂಭಂ ಶಿವಕುಮಾರ್ ರೆಡ್ಡಿ ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

ಮಹಿಳೆಯ ದೂರಿನ ಆಧಾರದ ಮೇಲೆ ಶಿವಕುಮಾರ್ ರೆಡ್ಡಿ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಕಬ್ಬನ್‌ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಅವರ ವಿರುದ್ಧ ಹೈದರಾಬಾದ್‌ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಮಿಳುನಾಡಿಗೆ ನೀರು – KRS ಡ್ಯಾಂನಲ್ಲಿ 5 ದಿನಕ್ಕೆ 2 TMC ನೀರು ಖಾಲಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್