ಗೃಹಲಕ್ಷ್ಮೀ ಹೇಗೆ ಮುಂದುವರೆಯುತ್ತದೆ ನೋಡೋಣ: ಹೆಚ್‍ಡಿಡಿ ವ್ಯಂಗ್ಯ

By
1 Min Read

ಹಾಸನ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಚಾಮುಂಡಿ ತಾಯಿಗೂ ಗೃಹಲಕ್ಷ್ಮೀ (Gruha Lakshmi) ಯೋಜನೆಯ 2 ಸಾವಿರ ರೂ. ದುಡ್ಡು ಕೊಟ್ಟು ನಮಗೆ ಶಕ್ತಿ ಕೊಡು ಎಂದು ಕೇಳಿದ್ದಾರೆ. ಆ ಗ್ಯಾರಂಟಿ ಹೇಗೆ ನಡೆಯುತ್ತದೆ ನೋಡೋಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ವ್ಯಂಗ್ಯವಾಡಿದ್ದಾರೆ.

ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೃಹಲಕ್ಷ್ಮೀ ಯೋಜನೆ ಎಷ್ಟು ದಿನ ನಡೆಯುತ್ತದೆ ಎಂದು ಈಗ ಹೇಳುವುದಿಲ್ಲ. ಮೂರ್ನಾಲ್ಕು ತಿಂಗಳು ಕಾಯೋಣ, ಆಮೇಲೆ ಹೇಗೆ ಮುಂದುವರೆಯುತ್ತದೆ ಎಂದು ನೋಡೋಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಇನ್ನೂ 7-8 ತಿಂಗಳು ಸಮಯವಿದೆ: ಐಎನ್‌ಡಿಐಎ ವಿರುದ್ಧ ಹೆಚ್‌ಡಿಡಿ ಅಸಮಾಧಾನ

ಕಳೆದ ಮೂರು ತಿಂಗಳಿನಿಂದ ಬಿಜೆಪಿಯವರು ಮಾಡಿರುವ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ದಿನಾ ತಮಟೆ ಹೊಡೆಯುತ್ತಿದ್ದಾರೆ. ಅವರನ್ನು ತನಿಖೆ ಮಾಡಬೇಡಿ ಎಂದು ಹಿಡಿದುಕೊಂಡಿರುವವರು ಯಾರು? ಬಿಟ್ ಕಾಯಿನ್ ಬಗ್ಗೆಯೂ ತನಿಖೆ ನಡೆಸಲಿ ಎಂದು ಗುಡುಗಿದರು.

ಕಾವೇರಿ ನೀರಿನ ವಿಚಾರವಾಗಿ, ನೀರಾವರಿ ಮಂತ್ರಿಗಳು ಯಾರಿಗೂ ಯಾವುದೇ ಮಾಹಿತಿಯನ್ನು ನೀಡದಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳಿಗೆ ಕರೆ ಮಾಡಿ ಡ್ಯಾಂನಲ್ಲಿರುವ ನೀರಿನ ಸಂಗ್ರಹ, ಹೊರಹರಿವು ಮತ್ತು ಒಳಹರಿವಿನ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ಮಾಹಿತಿ ಕೇಳಿದರೆ ನಮಗೆ ಸಚಿವರಿಂದ ಸೂಚನೆ ಇದೆ ಎನ್ನುತ್ತಿದ್ದಾರೆ. ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 5 ಬಾರಿ ಮರುಜನ್ಮ ಪಡೆದಿದ್ದೇನೆ, ನನ್ನ ಜೀವನದ ಬಗ್ಗೆ ಕನಿಕರದಿಂದ ನೋಡಿ: ಹೆಚ್‌ಡಿಕೆ ರಿಯಾಕ್ಷನ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್