ತುಳು ಭಾಷೆಯಲ್ಲಿ ಅವಕಾಶ ಸಿಕ್ಕರೆ ನಟಿಸುತ್ತೇನೆ- ಅನಂತ್ ನಾಗ್

Public TV
1 Min Read

ನ್ನಡ ಚಿತ್ರರಂಗದ ಲೆಜೆಂಡರಿ ನಟ ಅನಂತ್ ನಾಗ್ (Ananth Nag) ಅವರಿಗೆ ಇಂದು (ಸೆ.4) 75 ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅನಂತ್ ನಾಗ್ ಇದೀಗ ನೀಡಿರುವ ಹೇಳಿಕೆ ಸಖತ್ ಸದ್ದು ಮಾಡ್ತಿದೆ. ತುಳು ಭಾಷೆಯಲ್ಲಿ ಅವಕಾಶ ಸಿಕ್ಕರೆ ಖಂಡಿತಾ ನಟಿಸುತ್ತೇನೆ ಎಂದು ಖುಷಿಯಿಂದ ಮಾತನಾಡಿದ್ದಾರೆ.

ಮಂಗಳೂರಿನ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ಭಾನುವಾರ (ಸೆ.3) ಮಂಗಳೂರಿನ ಅನಂತನಾಗ್-75 ಅಭಿನಂದನಾ ಸಮಿತಿ ಹಾಗೂ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ಅನಂತ್ ನಾಗ್ ಅವರು ಮಾತನಾಡಿದರು. ನನ್ನ ಕರ್ಮಭೂಮಿ ಕರ್ನಾಟಕ ಕರಾವಳಿ. ಕರಾವಳಿಯ ಸೊಗಡು ಆಗಿರುವ ತುಳು ಭಾಷೆಯಲ್ಲಿ (Tulu Language) ಅವಕಾಶ ಸಿಕ್ಕಿದರೆ ಪೂರ್ಣ ಪ್ರಮಾಣದಲ್ಲಿ ನಾನು ನಟಿಸಲು ಸಿದ್ಧನಿದ್ದೇನೆ. ಇದು ತುಳು ಭಾಷೆಯ ಸಿನಿಮಾದಲ್ಲಿ ನಟಿಸುವ ಬಗ್ಗೆ ಹಿರಿಯ ನಟ ಅಭಿಮಾನದಿಂದ ಮಾತನಾಡಿದ್ದಾರೆ. ಇದನ್ನೂ ಓದಿ:ರಾಘವ, ಕಂಗನಾ ನಟನೆಯ ಚಂದ್ರಮುಖಿ‌ 2 ಟ್ರೈಲರ್ ರಿಲೀಸ್

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಸಂವಾದದಲ್ಲಿ ಈ ಕುರಿತು ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ಅನಂತನಾಗ್, ಆಳವಾದ ಪಾತ್ರವಿದ್ದರೆ, ಅನುಭವ ಉತ್ತಮವಾಗಿರುತ್ತದೆ. ಅನುಭವಕ್ಕೆ ತಕ್ಕಂತೆ ನಟನೆಗೆ ನಾನು ಯಾವತ್ತೂ ಸಿದ್ಧನಿದ್ದೇನೆ ಎಂದು ಮಾತನಾಡಿದರು.

ತಮ್ಮ ಸಹಜ ಅಭಿನಯದ ಮೂಲಕ ಮನೆ ಮಾತಾಗಿರುವ ನಟ ಅನಂತ್ ನಾಗ್ ಅವರ ಹುಟ್ಟುಹಬ್ಬಕ್ಕೆ (ಸೆ.4) ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳಿಗೆ ಫ್ಯಾನ್ಸ್ ಕಾಯ್ತಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್