ದೆಹಲಿಯಲ್ಲಿ ಗರಿಷ್ಠ ತಾಪಮಾನ- 85 ವರ್ಷಗಳಲ್ಲೇ ಸೆಪ್ಟೆಂಬರ್‌ನಲ್ಲಿ ಅತಿ ಹೆಚ್ಚಿನ ಬಿಸಿಲು

Public TV
1 Min Read

ನವದೆಹಲಿ: ಸೋಮವಾರ ದೆಹಲಿಯಲ್ಲಿ (NewDelhi) 40.1 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದ್ದು, ಕಳೆದ 85 ವರ್ಷಗಳಲ್ಲಿ ಸೆಪ್ಟೆಂಬರ್‍ನಲ್ಲಿ ವರದಿಯಾದ ಅತಿಹೆಚ್ಚಿನ ತಾಪಮಾನ ಎಂದು ಹವಮಾನ ಇಲಾಖೆ ಹೇಳಿದೆ.

1938ರ ಸೆಪ್ಟೆಂಬರ್ 16 ರಂದು ದಾಖಲಾದ 40.6 ಡಿಗ್ರಿ ಸೆಲ್ಸಿಯಸ್ ಸೆಪ್ಟೆಂಬರ್ ನಲ್ಲಿ ಸಾರ್ವಕಾಲಿಕ ಗರಿಷ್ಠ ತಾಪಮಾನ ದಾಖಲಾಗಿತ್ತು. ಹೆಚ್ಚಿನ ತಾಪಮಾನಕ್ಕೆ ಮಳೆ (Rain) ಕೊರತೆ ಮತ್ತು ದುರ್ಬಲ ಮಾನ್ಸೂನ್ ಪರಿಸ್ಥಿತಿಗಳು ಕಾರಣವೆಂದು ಹವಾಮಾನ ಇಲಾಖೆ (Weather Department) ಹೇಳಿದೆ. ದೆಹಲಿಯಲ್ಲಿ ಆಗಸ್ಟ್‍ನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿತ್ತು. ಆದರೆ ಈ ಬಾರಿ ಶೇ.61 ರಷ್ಟು ಮಳೆಯ ಕೊರತೆ ಕಂಡುಬಂದಿದ್ದು, ಸೆಪ್ಟೆಂಬರ್ 4 ರವರೆಗಿನ ತಿಂಗಳ ಸಾಮಾನ್ಯ ಮಳೆ 32.4 ಮಿ.ಮೀ ಆಗಿದ್ದರೆ ಸೆಪ್ಟೆಂಬರ್‍ನಲ್ಲಿ ಇಲ್ಲಿಯವರೆಗೆ ಮಳೆಯಿಲ್ಲ. ಇದನ್ನೂ ಓದಿ: ದೇಶದಲ್ಲೇ ಪ್ರಥಮ 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ

ಪ್ರಾದೇಶಿಕ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, 7 ದಿನಗಳಲ್ಲಿ ನಗರದಲ್ಲಿ ಸ್ವಲ್ಪಮಟ್ಟಿಗೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಈ ವಾರ ಗರಿಷ್ಠ ಮತ್ತು ಕನಿಷ್ಠ ತಾಪಮಾನ 37 ಮತ್ತು 27 ಡಿಗ್ರಿ ಸೆಲ್ಸಿಯಸ್‍ನಲ್ಲಿ ನೆಲೆಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂತೆಯೇ ಈ ವರ್ಷ ದೇಶವು ಮಳೆಯ ಭೀಕರ ಕೊರತೆಯ ನಡುವೆ ಶತಮಾನದಲ್ಲಿ ಆಗಸ್ಟ್‍ನಲ್ಲಿ ತನ್ನ ಗರಿಷ್ಠ ಸರಾಸರಿ ತಾಪಮಾನವನ್ನು ದಾಖಲಿಸಿದೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್