ತಮಿಳುನಾಡು ಯುವಜನ- ಕ್ರೀಡಾ ವ್ಯವಹಾರಗಳ ಸಚಿವ ಹಾಗೂ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯ್ನಿಧಿ ಸ್ಟಾಲಿನ್ (Udayanidhi Stalin) ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ನೀಡಿದ್ದ ಹೇಳಿಕೆ ಕನ್ನಡದ ‘ಬಿಗ್ ಬಾಸ್’ ಪ್ರಥಮ್ (Bigg Boss Pratham) ಪ್ರತಿಕ್ರಿಯೆ ನೀಡಿದ್ದಾರೆ. ಬೇರೆಯವರ ಭಾವನೆಗಳನ್ನು ನೋಯಿಸಿದರೆ ನಮ್ಮನ್ನು ಮನುಷ್ಯರು ಅಂತಾರಾ ಎಂದು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಟ ಪ್ರಥಮ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:ಮಾಸ್ ಮಹಾರಾಜ ರವಿತೇಜ ಜೊತೆ ಹೆಜ್ಜೆ ಹಾಕಿದ ನೂಪುರ್ ಸನೋನ್
ಈ ನಡುವೆ ಉದಯ್ನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಕ್ಕೆ ಪ್ರಥಮ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಎಲ್ಲರಿಗೂ ಅವರದ್ದೇ ಆದ ಧರ್ಮ ಇದೆ ನಂಬಿಕೆ ಇದೆ, ನಿನಗಿಷ್ಟ ಇಲ್ಲ ಅಂದ್ರೆ ಬೇಡ. ಬೇರೆಯವರ ಭಾವನೆಗಳನ್ನ ನೋಯಿಸಿದರೆ ಮನುಷ್ಯರು ಅಂತಾರಾ? ಸನಾತನ ಧರ್ಮ ಬಹಳ ಕಾಲದಿಂದ ಇದೆ. ಪ್ರತಿಯೊಂದು ಧರ್ಮವನ್ನು ನಾವು ಗೌರವಿಸಬೇಕು ಎಂದು ಪ್ರಥಮ್ ಮಾತನಾಡಿದ್ದಾರೆ.

ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.
ಈ ನಡುವೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ ಕಮಿಷನರ್ಗೆ ಲೀಗಲ್ ನೋಟಿಸ್ ಕಳುಹಿಸಿದೆ.


