ಪ್ರತಿಭಟನೆ ವೇಳೆ ಬಿಜೆಪಿ ಸಂಸದರ ಮೇಲೆ ಹೆಜ್ಜೇನು ದಾಳಿ

Public TV
1 Min Read

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ (BJP) ಸಂಸದ ಮುನಿಸ್ವಾಮಿ (S. Muniswamy) ಹಾಗೂ ಕಾರ್ಯಕರ್ತರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಕೋಲಾರದ (Kolar) ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದಿದೆ.

ಪ್ರತಿಭಟನೆ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿವೆ. ವ್ಯಕ್ತಿ ಒಬ್ಬನಿಗೆ ವಿಪರೀತವಾಗಿ ಜೇನ್ನೊಣಗಳು ಮುತ್ತಿಗೆ ಹಾಕುತ್ತಿದ್ದಂತೆ ಸಂಸದ ಮುನಿಸ್ವಾಮಿ ಸೇರಿದಂತೆ ಎಲ್ಲಾ ನಾಯಕರು, ಪೊಲೀಸರು ಹಾಗೂ ಕಾರ್ಯಕರ್ತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಆದರೂ ಮುನಿಸ್ವಾಮಿ ಸೇರಿದಂತೆ ಪತ್ರಕರ್ತರು ಹಾಗೂ ಕೆಲವು ಕಾರ್ಯಕರ್ತರಿಗೆ ಜೇನ್ನೊಣಗಳು ಕಚ್ಚಿವೆ. ಬಳಿಕ ಸಂಸದರು ಜಿಲ್ಲಾಧಿಕಾರಿಗಳ ಕಚೇರಿ ಸೇರಿ ರಕ್ಷಣೆ ಪಡೆದುಕೊಂಡರು. ಇದನ್ನೂ ಓದಿ: ಮೂರು ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು

ಹೆಜ್ಜೇನು ದಾಳಿಯಿಂದ ದಿಕ್ಕಪಾಲಾದ ಜನರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ತೀವ್ರವಾಗಿ ದಾಳಿಗೊಳಗಾದವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಕೆಲವರು ಬೆಂಕಿ ಹಾಕಿ ಜೇನ್ನೊಣಗಳನ್ನು ಓಡಿಸಲು ಪ್ರಯತ್ನಿಸಿದ ಪ್ರಸಂಗವು ನಡೆಯಿತು.

ಸಂಸದರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಬಳಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ಜೆಡಿಎಸ್ ಕಾರ್ಯಕರ್ತರಿಗೆ ವೀರ ಸಂದೇಶ ಕೊಟ್ಟ ಹೆಚ್‍ಡಿಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್