ನಾನೊಬ್ಬ ಹೆಮ್ಮೆಯ ಹಿಂದೂ: ರಿಷಿ ಸುನಕ್

Public TV
1 Min Read

ನವದೆಹಲಿ: 18ನೇ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಭಾರತಕ್ಕೆ ಆಗಮಿಸಿದ್ದು, ನಾನೊಬ್ಬ ಹೆಮ್ಮೆಯ ಹಿಂದೂ (Hindu) ಎಂದು ಹೇಳಿದ್ದಾರೆ.

ಭಾರತಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಹೆಮ್ಮೆಯ ಹಿಂದೂ. ನಾನು ಹಿಂದೂ ಆಗಿಯೇ ಬೆಳೆದಿದ್ದೇನೆ. ನಾನು ಹೀಗೆಯೇ ಇದ್ದೇನೆ. ಮುಂದಿನ ಒಂದರಡು ದಿನಗಳಲ್ಲಿ ಹಲವು ದೇವಾಲಯಗಳಿಗೆ (Temple) ಭೇಟಿ ನೀಡಲಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಭ್ರಷ್ಟಾಚಾರ ಕೇಸ್‌ – ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್‌

ಖಲಿಸ್ತಾನಿ ಕೃತ್ಯವನ್ನು ಖಂಡಿಸಿದ ಅವರು, ಭಾರತದ ಸಹಾಯದೊಂದಿಗೆ ಖಲಿಸ್ತಾನಿ ಹಾವಳಿಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಅಲ್ಲದೇ ಪ್ರಧಾನಿ ಮೋದಿಯವರ (Narendra Modi) ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ವಿಚಾರದಲ್ಲಿ ಭಾರತದ ನಿಲುವಿಗೆ ನಮ್ಮ ಸಹಮತ ಇದೆ: ರಾಹುಲ್‌ ಗಾಂಧಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ (Akshata Murthy) ಅವರು ಶುಕ್ರವಾರ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅಲ್ಲಿ ಅವರನ್ನು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಸ್ವಾಗತಿಸಿದರು. ಅಲ್ಲದೇ ಸುನಕ್ ದಂಪತಿಗೆ ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ಪ್ರತಿ, ರುದ್ರಾಕ್ಷಿಯನ್ನು ನೀಡಿದರು. ಇದನ್ನೂ ಓದಿ: G20 ಸಭೆ- ವಿದೇಶಿ ಗಣ್ಯರಿಗೆ ವಿಶೇಷ ಭದ್ರತೆ

ರಿಷಿ ಸುನಕ್ ಅವರು ತಮ್ಮ ಮೂರು ದಿನಗಳ ಭಾರತ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: 15ಕ್ಕೂ ಹೆಚ್ಚು ದೇಶಗಳ ನಾಯಕರ ಜೊತೆ ಮೋದಿ ದ್ವಿಪಕ್ಷೀಯ ಸಭೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್