ಜಿ20 ಸಭೆಯಲ್ಲಿ ರಷ್ಯಾ-ಉಕ್ರೇನ್‌ ವಾರ್‌; ವಿಶ್ವ ನಾಯಕರ ಘೋಷಣೆಯೇನು?

Public TV
1 Min Read

ನವದೆಹಲಿ: ದಿಲ್ಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ (G20 Summit) ರಷ್ಯಾ-ಉಕ್ರೇನ್‌ ಯುದ್ಧದ (Russia-Ukraine War) ವಿಚಾರವೂ ಸದ್ದು ಮಾಡಿತು. ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿ ಸ್ಥಾಪನೆಗೆ ಜಿ20 ನಾಯಕರು ಕರೆ ನೀಡಿದರು. ಚರ್ಚೆ ವೇಳೆ ಎಲ್ಲಿಯೂ ರಷ್ಯಾ ಹೆಸರನ್ನು ನೇರವಾಗಿ ಪ್ರಸ್ತಾಪಿಸಲಿಲ್ಲ.

G20 ಸದಸ್ಯ ರಾಷ್ಟ್ರಗಳು ಪ್ರಾದೇಶಿಕ ಸ್ವಾಧೀನವನ್ನು ಪಡೆಯಲು ಬಲದ ಬಳಕೆಯಿಂದ ದೂರವಿರಬೇಕು. ಯಾವುದೇ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಯನ್ನು ಹಾಳುಮಾಡುವ ಕ್ರಮಗಳನ್ನು ತೆಗೆದುಕೊಳ್ಳಬಾರದು. ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಅಥವಾ ಬೆದರಿಕೆಯನ್ನು ‘ಸ್ವೀಕಾರಾರ್ಹವಲ್ಲ’ ಎಂದು ಪರಿಗಣಿಸಲಾಗುತ್ತದೆಂದು ಜಿ20 ಸಭೆಯಲ್ಲಿ ಘೋಷಿಸಲಾಯಿತು. ಇದನ್ನೂ ಓದಿ: G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ

ಯುರೋಪಿಯನ್‌ ಒಕ್ಕೂಟದ ಚಾರ್ಟರ್‌ಗೆ ಅನುಗುಣವಾಗಿ, ಯಾವುದೇ ರಾಜ್ಯದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವ ಅಥವಾ ರಾಜಕೀಯ ಸ್ವಾತಂತ್ರ್ಯದ ವಿರುದ್ಧ ಪ್ರಾದೇಶಿಕ ಸ್ವಾಧೀನಪಡಿಸಿಕೊಳ್ಳಲು ಬೆದರಿಕೆ, ಬಲದ ಬಳಕೆಯಿಂದ ದೂರವಿರಬೇಕು ಎಂದು ಜಿ20 ನಾಯಕರು ಆರಂಭಿಕ ದಿನದಂದು ಅಂಗೀಕರಿಸಿದ ಘೋಷಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವ, ಅಂತರರಾಷ್ಟ್ರೀಯ ಮಾನವೀಯ ಕಾನೂನು ಮತ್ತು ಶಾಂತಿ ಕಾಪಾಡುವ ಬಹುಪಕ್ಷೀಯ ವ್ಯವಸ್ಥೆ ಸೇರಿದಂತೆ ಅಂತರರಾಷ್ಟ್ರೀಯ ಕಾನೂನಿನ ತತ್ವಗಳನ್ನು ಎತ್ತಿ ಹಿಡಿಯಲು ನಾವು ಎಲ್ಲಾ ರಾಷ್ಟ್ರಗಳಿಗೆ ಕರೆ ನೀಡುತ್ತೇವೆ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಜಿ20 ಸಭೆಯಲ್ಲಿ ಮತ್ತೆ ‘ಭಾರತ್’ ನಾಮಸ್ಮರಣೆ – ಪ್ರಧಾನಿ ಆಸನದ ಮುಂದೆ ಭಾರತ್ ಪದ ಬಳಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್