ಸಮುದ್ರ ತೀರದಲ್ಲಿ ಯಶ್‌ ಫ್ಯಾಮಿಲಿ- ಪುತ್ರಿ ಜೊತೆ ರಾಧಿಕಾ ತುಂಟಾಟ

Public TV
1 Min Read

ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಯಶ್(Yash) ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬಕ್ಕೆ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಇದೀಗ ಸಮುದ್ರ ತೀರದಲ್ಲಿ ಕಾಲ ಕಳೆಯುತ್ತಿರುವ ಸುಂದರ ಫೋಟೋವನ್ನು ರಾಧಿಕಾ ಪಂಡಿತ್ (Radhika Pandit) ಹಂಚಿಕೊಂಡಿದ್ದಾರೆ. ನಟಿಯ ಹೊಸ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ರಾಧಿಕಾ ಪಂಡಿತ್ ಅವರು ಪ್ರತಿ ವಾರಾಂತ್ಯ ಫ್ಯಾನ್ಸ್‌ಗಾಗಿ ಹೊಸ ಪೋಸ್ಟ್ ಶೇರ್ ಮಾಡುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಅವರ ಕುಟುಂಬದ ಚೆಂದದ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದನ್ನೂ ಓದಿ:‘ಸೋಮು ಸೌಂಡ್ ಇಂಜಿನಿಯರ್’ ಟೈಟಲ್ ಟ್ರ್ಯಾಕ್ : ಸೂರಿ ಶಿಷ್ಯನ ಚೊಚ್ಚಲ ಪ್ರಯತ್ನ

 

View this post on Instagram

 

A post shared by Radhika Pandit (@iamradhikapandit)

ಯಶ್ 19 (Yash 19) ಸಿನಿಮಾಗಾಗಿ ರಾಕಿಭಾಯ್ ತೆರೆಮರೆಯಲ್ಲಿ ತಯಾರಿ ಮಾಡ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಅಧಿಕೃತವಾಗಿ ಅನೌನ್ಸ್ ಆಗುವವರೆಗೂ ತಮ್ಮ ಪ್ರಾಜೆಕ್ಟ್ ಬಗ್ಗೆ ಎಲ್ಲಿಯೂ ಲೀಕ್ ಆಗದಂತೆ ನಟ ನೋಡಿಕೊಳ್ತಿದ್ದಾರೆ. ಅಕ್ಟೋಬರ್‌ನಲ್ಲಿ ಯಶ್ ಮುಂದಿನ ಸಿನಿಮಾ ಬಗ್ಗೆ ಉತ್ತರ ಸಿಗಲಿದೆ ಎನ್ನಲಾಗುತ್ತಿದೆ.

ಸ್ಯಾಂಡಲ್‌ವುಡ್ (Sandalwood) ಸಿಂಡ್ರೆಲಾ ರಾಧಿಕಾ ಪಂಡಿತ್ (Radhika Pandit) ನಟನೆಯ ಮೊಗ್ಗಿನ ಮನಸ್ಸು (Moggina Manasu) ಟು ಆದಿಲಕ್ಷ್ಮಿ ಪುರಾಣ ಸಿನಿಮಾವರೆಗೂ ಉತ್ತಮ ಸಿನಿಮಾಗಳನ್ನ ನೀಡಿ ಅಭಿಮಾನಿಗಳ ಪಾಲಿಗೆ ನೆಚ್ಚಿನ ನಾಯಕಿಯಾಗಿ ಮಿಂಚಿದವರು. ಈಗ ಮದುವೆ, ಸಂಸಾರ ಅಂತಾ ಕುಟುಂಬದ ಕಡೆಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಸಿನಿಮಾಗೆ ಕಮ್‌ಬ್ಯಾಕ್ ಆಗುವ ಬಗ್ಗೆ ನಟಿ ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್