ಬೆಂಗಳೂರು ಬಂದ್‌ಗೆ ಉತ್ತರ ಕನ್ನಡ ಜಿಲ್ಲೆಯ ಚಾಲಕರ ಸಂಘ ಬೆಂಬಲ

Public TV
2 Min Read

ಕಾರವಾರ: ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್‌ಗೆ (Bengaluru Bandh) ಉತ್ತರ ಕನ್ನಡ (Uttara Kannada) ಜಿಲ್ಲೆಯ ಆಟೋ, ಟೆಂಪೋ, ಟ್ಯಾಕ್ಸಿ ಚಾಲಕರ ಹಾಗೂ ಮಾಲೀಕರ ಸಂಘ ಬೆಂಬಲ ಘೋಷಿಸಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉತ್ತರ ಕನ್ನಡ ಜಿಲ್ಲಾ ಆಟೋ (Auto) ಚಾಲಕ ಹಾಗೂ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ದಿಲೀಪ್.ಜಿ ಅರ್ಗೇಕರ್, ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಮತ್ತು ಆಟೋ, ಟೆಂಪೋ ಮತ್ತು ಟ್ಯಾಕ್ಸಿ ನಂಬಿಕೊಂಡು ಜೀವನ ನಡೆಸುತ್ತಿರುವ ಬಹುಸಂಖ್ಯಾತರು ಬೀದಿಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರೆ ಕೊಟ್ಟಿರುವ ಬಂದ್‌ಗೆ ಬೆಂಬಲ ಘೋಷಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಬಂದ್‌ಗೆ ಕರೆ; ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ

ನಮ್ಮ ಬೇಡಿಕೆಯಂತೆ ಶಕ್ತಿ ಯೋಜನೆಯಿಂದ ಸಂಕಷ್ಟ ಎದುರಿಸುತ್ತಿರುವ ಚಾಲಕರಿಗೆ ಜೀವನ ನಿರ್ವಹಣೆಗೆ ಭತ್ಯೆಯಾಗಿ ಪ್ರತಿ ತಿಂಗಳು ರಾಜ್ಯ ಸರ್ಕಾರ 10,000 ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ನೆಮ್ಮದಿಯ ಜೀವನ ನಡೆಸುತ್ತಿದ್ದ ನಾವುಗಳು ಸರ್ಕಾರದ ಯೋಜನೆಯಿಂದಲೇ ಇಂದು ಈ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ಖಾಸಗಿ ವಾಹನ ಚಾಲಕರ ಕುಟುಂಬಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಅದಕ್ಕೆ ಸರ್ಕಾರವೇ ಹೊಣೆಯಾಗಿರುತ್ತದೆ. ನಾವು ಕೇಳುತ್ತಿರುವ ಬೇಡಿಕೆಗಳು ನ್ಯಾಯಯುತವಾಗಿದೆ. ನಮ್ಮ ಬದುಕಿನ ಮೇಲೆ ಬರೆ ಎಳೆದ ಸರ್ಕಾರವೇ ನಮ್ಮ ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಂಕೋಲಾ ಮತ್ತು ಕಾರವಾರ ಟೆಂಪೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕಿಶೋರ್ ನಾಯ್ಕ್, ಮತ್ತು ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸಂತೋಷ್ ನಾಯ್ಕ್ ಹಾಗೂ ಅಸ್ನೋಟಿ ಮತ್ತು ಮಲ್ಲಾಪುರ ಮಾರ್ಗದ ಟೆಂಪೋ ಚಾಲಕರ ಸಂಘ ಕೂಡ ಬಂದ್‌ಗೆ ಬೆಂಬಲ ಘೋಷಿಸಿದೆ. ಇದನ್ನೂ ಓದಿ: ನಾಳೆ ಬೆಂಗಳೂರು ಬಂದ್; 500 ಹೆಚ್ಚುವರಿ ಬಸ್ ರಸ್ತೆಗಿಳಿಸಲು ಬಿಎಂಟಿಸಿ ನಿರ್ಧಾರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್