ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

By
1 Min Read

ನವದೆಹಲಿ: ಸುಪ್ರೀಂಕೋರ್ಟ್ (SupremeCourt) ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.

ರೇಣು ಸಿನ್ಹಾ (Renu Sinha) ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸ್ ಮಾಹಿತಿ ಪ್ರಕಾರ, ಬಂಗಲೆಯನ್ನು ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಪ್ರವೇಶ ಮಾಡಿದಾಗ ರೇಣು ಸಿನ್ಹಾ ಶವ ಬಾತ್ ರೂಂನಲ್ಲಿ ಬಿದ್ದಿತ್ತು. ಹತ್ಯೆ ಮಾಡಿದ ಆರೋಪಿ ಅಜಯ್ ನಾಥ್ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಅವರನ್ನು ಬಂಧಿಸಲಾಗಿದೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಸಹೋದರ ಬಹಿರಂಗಪಡಿಸಿದ್ದಾನೆ. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು ಮತ್ತು ಮುಂಗಡವನ್ನೂ ತೆಗೆದುಕೊಂಡಿದ್ದರು ಎಂದು ಒಪ್ಪಿಕೊಂಡರು. ಆದರೆ ತಮ್ಮ ನಿರ್ಧಾರಕ್ಕೆ ಪತ್ನಿ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಮತ್ತು ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ, ಕ್ಯಾನ್ಸರ್ ಮುಕ್ತವಾಗಿದ್ದರು ಎಂದು ವಿಚಾರಣೆ ವೇಳೆ ಅಜಯ್ ನಾಥ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಅತಿಯಾದ ರಕ್ತ ಸೋರಿಕೆಯಿಂದ ರೇಣು ಸಾವನ್ನಪ್ಪಿರಬಹುದು ಎಂದು ತಿಳಿದು ಬಂದಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಪೊಲೀಸರು ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್