ಸರ್ಕಾರ ನೀರು ಬಿಡಲ್ಲವೆಂದು ಗಟ್ಟಿಯಾಗಿ ನಿಂತ್ರೆ ನಾವೂ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ

By
1 Min Read

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ (Tamilnadu) ಯಾವುದೇ ಕಾರಣಕ್ಕೂ ಕಾವೇರಿ ನೀರು (Cauvery Water) ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಕಾವೇರಿ ನೀರು ನಿಯಂತ್ರಣಾ ಸಮಿತಿಯ (CWRC) ಪ್ರತಿ ದಿನ 5000 ಕ್ಯೂಸೆಕ್‌ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಸ್ತು ಸ್ಥಿತಿ ನೋಡಿದರೆ, ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ. ಮಂಡ್ಯ ಜಿಲ್ಲೆ ಒಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಬಿಟ್ಟಿರುವುದು ಕೇವಲ 7 ಟಿಎಂಸಿ ಮಾತ್ರ‌. ಭತ್ತ ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ‌. ನಾಳೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ (CWMA) ಸಭೆ ಇದೆ. ಅಲ್ಲಿ ರಾಜ್ಯ ಸರ್ಕಾರ ವಾಸ್ತವ ಹೇಳಬೇಕು. ಸಭೆಯಿಂದ ಹೊರಬರುತ್ತಾರೋ ಏನು ಮಾಡುತ್ತಾರೋ ಅವರಿಗೆ ಬಿಟ್ಟಿದ್ದು. ಮುಂದಿನ ವಾರ ಸುಪ್ರೀಂಕೊರ್ಟ್ ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ. ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಇವರು ಗಟ್ಟಿಯಾಗಿ ನಿಲ್ಲಬೇಕು. ಅಂದರೆ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ಇವರು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಹೇಳುತ್ತಾರೆ. ಅದನ್ನು ಬಿಟ್ಡು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಮನವೊಲಿಕೆ ಮಾಡಬೇಕು ಎಂದು ಹೇಳಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್