ತವರು ಮನೆಗೆ ಹೋಗಿದ್ದ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

By
1 Min Read

ಕಲಬುರಗಿ: ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿಯೇ ಗುಂಡಿಟ್ಟು ಕೊಂದಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ಅಲ್ಲೂರ್ ಕೆ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಘಟನೆ ನಡೆದಿದೆ. ಹನಮವ್ವ (36) ಕೊಲೆಯಾದ ಮಹಿಳೆ. ಆಕೆಯ ಗಂಡ ಬಸವರಾಜ್ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಮದುವೆ ಆದಾಗಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳವಾಗುತ್ತಿದ್ದು, ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಇಂದು ಬೆಳಗ್ಗೆ ತವರು ಮನೆಯಲ್ಲಿದ್ದ ಪತ್ನಿಯನ್ನು ಬಸವರಾಜ್ ಗುಂಡಿಟ್ಟು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಡೀಲ್‍ನಲ್ಲಿ ‘ವಿಶ್ವನಾಥ್‌ ಜೀʼ ಪಾತ್ರಧಾರಿ ಚನ್ನನಾಯ್ಕ್ ತನ್ನ ಪಾತ್ರದ ಬಗ್ಗೆ ವಿವರಿಸಿದ್ದು ಹೀಗೆ..

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಫಾ ವೈರಸ್ ಹರಡುವ ಭೀತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್