ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೃತಧಾರೆ’ ರಿಲೀಸ್ ಆಗಿ ಇಂದಿಗೆ 18 ವರ್ಷ

By
1 Min Read

ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ನಿರ್ದೇಶನದಲ್ಲಿ ಮೂಡಿ ಬಂದ ‘ಅಮೃತಧಾರೆ’ (Amruthadhare) ಸಿನಿಮಾ ರಿಲೀಸ್ ಆಗಿ ಇಂದಿಗೆ 18 ವರ್ಷಗಳಾಗಿವೆ. ಈ ಸಿಹಿ ನೆನಪುಗಳನ್ನು ನಿರ್ದೇಶಕರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಜೊತೆಗೆ ಆ ಸಿನಿಮಾದ ಫೋಟೋವೊಂದನ್ನು ಹಂಚಿಕೊಂಡು, ಅದರ ದಾಖಲೆಯನ್ನು ನೆನಪಿಸಿಕೊಂಡಿದ್ದಾರೆ.

16ನೇ ಸೆಪ್ಟೆಂಬರ್ 2005ರಲ್ಲಿ ಈ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಬೆಂಗಳೂರಿನ ಸಾಗರ ಚಿತ್ರಮಂದಿರದಲ್ಲೇ ಬರೋಬ್ಬರಿ 40 ವಾರಗಳ ಭರ್ಜರಿ ಪ್ರದರ್ಶನವನ್ನು ಕಂಡು ದಾಖಲೆ ಬರೆದಿತ್ತು. ಈ ಸಿನಿಮಾದ ಮೂಲಕ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಅವರು ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಹೆಗ್ಗಳಿಕೆಗಳಲ್ಲಿ ಇದು ಕೂಡ ಒಂದಾಗಿತ್ತು. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ‘ಸೀತಾರಾಮಂ’ ಬೆಡಗಿ

ಮೋಹಕ ತಾರೆ ರಮ್ಯಾ (Ramya) ಮತ್ತು ಧ್ಯಾನ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಸಿನಿಮಾದಲ್ಲಿ ಉತ್ಕಟ ಪ್ರೇಮವಿತ್ತು. ಕಥಾ ನಾಯಕ ಮತ್ತು ನಾಯಕಿ ಈ ಯುವ ಜೋಡಿ ಮದುವೆಯಾದರೂ, ಗಂಡ ಹೆಂಡತಿ ರೀತಿಯಲ್ಲಿ ಬದುಕುವುದು ಬೇಡ, ಸ್ನೇಹಿತರಾಗಿ ಇರೋಣ ಎಂದುಕೊಂಡು ಜೀವನ ನಡೆಸುತ್ತಿರುವಾಗ, ಈ ಜೋಡಿಯಲ್ಲಿ ಸಮಸ್ಯೆಯೊಂದು ಕಾಣಿಸುತ್ತದೆ. ಆಗ ಅದನ್ನು ಅವರು ಹೇಗೆ ದಾಟಿಕೊಳ್ಳುತ್ತಾರೆ ಎನ್ನುವುದೇ ಸಿನಿಮಾವಾಗಿತ್ತು.

 

ನಾಗತಿಹಳ್ಳಿ ಚಂದ್ರಶೇಖರ್ ಬರಹದಲ್ಲಿ ಮೂಡಿ ಬಂದಿದ್ದ ಈ ಸಿನಿಮಾವನ್ನು ಅನೇಕ ಪ್ರೇಮಿಗಳು ಮೆಚ್ಚಿದ್ದರು. ಆದರೆ, ದುರಂತದ ಕಥನವನ್ನು ನೋಡಿ ಕಣ್ಣೀರಿಟ್ಟಿದ್ದರು. ಧ್ಯಾನ್ ಮತ್ತು ರಮ್ಯಾ ಜೋಡಿಯ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿದ್ದವು. ಇದೀಗ ಆ ಸಿನಿಮಾಗೆ 18ರ ಹರೆಯ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್