ದೇಶದ ಶ್ರೀಮಂತ ಗಣೇಶನಿಗೆ ಬರೋಬ್ಬರಿ 360 ಕೋಟಿ ಇನ್ಶುರೆನ್ಸ್‌; 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ

Public TV
2 Min Read

ಮುಂಬೈ: ದೇಶಾದ್ಯಂತ ಗಣೇಶ ಹಬ್ಬದ (Ganesh Chaturthi) ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನ (Ganesh Idol) ಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.

ಈ ನಡುವೆ ಮುಂಬೈನ ಜಿಎಸ್‌ಬಿ ಸೇವಾ ಮಂಡಲ (GSB Seva Mandal) ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿಯನ್ನು ಬಳಕೆ ಮಾಡಲಾಗಿದೆ. ಇದನ್ನೂ ಓದಿ: ಫ್ರೀ ಕರೆಂಟ್, ಮಹಿಳೆಯರಿಗೆ ತಿಂಗಳಿಗೆ 2,500 ರೂ., ಉಚಿತ ಬಸ್ ಪ್ರಯಾಣ: ತೆಲಂಗಾಣದಲ್ಲೂ ಕಾಂಗ್ರೆಸ್ ಗ್ಯಾರಂಟಿ ಘೋಷಣೆ

ಹೌದು.. ಮುಂಬೈನ ಅತ್ಯಂತ ದೊಡ್ಡ ಗಣೇಶ ಎನ್ನಲಾದ ಕಿಂಗ್ಸ್​ ಸರ್ಕಲ್​​ನ ಈ ಗಣಪತಿಗೆ ಹೀಗೆ ಚಿನ್ನ-ಬೆಳ್ಳಿಯಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ. ಜಿಎಸ್​​ಬಿ ಸೇವಾ ಮಂಡಲದವರು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸುವ ಈ ಗಣೇಶ ಉತ್ಸವ ಪ್ರಸಿದ್ಧಿ ಪಡೆದಿದ್ದು, ಪ್ರತಿ ವರ್ಷವೂ ದೇಶದ ಗಮನ ಸೆಳೆಯುತ್ತದೆ. ಈ ಬಾರಿ ಸೆ.19ರಿಂದ 23ರ ವರೆಗೂ ಇಲ್ಲಿ ಗಣೇಶ ಚತುರ್ಥಿ ಉತ್ಸವ ಆಚರಣೆ ಆಗಲಿದೆ.

ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಇದನ್ನೂ ಓದಿ: ಗದರ್‌-2 ಸಿನಿಮಾ ನೋಡಿ ‘ಹಿಂದೂಸ್ತಾನ್‌ ಜಿಂದಾಬಾದ್‌’ ಎಂದು ಕೂಗಿದ ವ್ಯಕ್ತಿಯನ್ನ ಹೊಡೆದು ಕೊಂದ ಸ್ನೇಹಿತರು

ಕಳೆದ ವರ್ಷ ಜಿಎಸ್‌ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್