‘ಕುದ್ರು’ ಸಿನಿಮಾದಲ್ಲಿ ಕ್ಲಾಸ್ ಬಂಕ್ ಹಾಡು

By
1 Min Read

ಕುದ್ರು (Kudru) ಚಿತ್ರದ ‘ಉಡಾಯಿಸು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಇದು ಚಿತ್ರದ  ಮೂರನೇ ಹಾಡಾಗಿದ್ದು, ಈ ಹಾಡನ್ನು (Song) ಉಡುಪಿ ಹಾಗೂ ಮಲೆನಾಡು ಪ್ರದೇಶದ ಸುಂದರ ಪರಿಸರದಲ್ಲಿ  ಚಿತ್ರಿಕರಿಸಲಾಗಿದೆ. ಉಡಾಯಿಸು ಕಾಲೇಜು ಹುಡುಗರಿಗಾಗಿ ಚಿತ್ರೀಕರಿಸಿದ ಹಾಡು. ಕಾಲೇಜಲ್ಲಿ ಕ್ಲಾಸ್ ಬಂಕ್ ಮಾಡಿ ಎಂಜಾಯ್ ಮಾಡುವ ಗೀತೆಯಿದು.

ನಾನು ಮೂಲತಃ ಉಡುಪಿಯವನು. ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದು ನಿರ್ದೇಶಿಸಿ, ನಿರ್ಮಾಣ ಮಾಡಿದ್ದೇನೆ ಎನ್ನುತ್ತಾರೆ ಭಾಸ್ಕರ ನಾಯ್ಕ್ (Bhaskar Naik). ಕುದ್ರು ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ  ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ.

ಕುದ್ರು ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು  ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು ಚಿತ್ರದಲ್ಲಿ ತೋರಿಸುತ್ತಿದ್ದೇವೆ.

 

ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಮಾಡಿ, ಸುದೇಷ್ಣ ದಾಸ್ ಹಾಗೂ ಪ್ರತೀಕ್ ಕುಂಡು ಧ್ವನಿ ಕೊಟ್ಟಿರುತ್ತಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್