‘ದಿ ವ್ಯಾಕ್ಸಿನ್ ವಾರ್’ ನೂರಕ್ಕೆ ನೂರರಷ್ಟು ನೈಜ ಘಟನೆ ಆಧರಿಸಿದ ಸಿನಿಮಾ: ಅಗ್ನಿಹೋತ್ರಿ

By
1 Min Read

ದಿ ಕಾಶ್ಮೀರ್ ಫೈಲ್ಸ್  (The Kashmir Files) ಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ  (Vivek Agnihotri) ದಿ ವ್ಯಾಕ್ಸಿನ್ ವಾರ್ ಸಿನಿಮಾ ಮಾಡಿದ್ದು, ಸದ್ಯದಲ್ಲೇ ಆ ಚಿತ್ರ ಬಿಡುಗಡೆ ಆಗುತ್ತಿದೆ. ಜೊತೆಗೆ ಈ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ಕುತೂಹಲ ಮೂಡಿಸಿದೆ. ದಿ ಕಾಶ್ಮೀರ್ ಫೈಲ್ಸ್ ನಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಯ ಕುರಿತಾಗಿ ಕಥೆ ಹೇಳಿದ್ದ ನಿರ್ದೇಶಕರು ವ್ಯಾಕ್ಸಿನ್ ವಾರ್ ಚಿತ್ರದಲ್ಲಿ ಏನನ್ನು ಹೇಳಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಕ್ಯೂರಿಯಾಟಿಸಿ ಎಲ್ಲರದ್ದು.

ಈ ಕುರಿತಾಗಿ ಮಾಧ್ಯಮಗಳ ಜೊತೆ ಮಾತನಾಡಿದ ವಿವೇಕ್ ಅಗ್ನಿಹೋತ್ರಿ, ಕೋವಿಡ್‍ ದಿನಗಳ ಕಥೆ ಸಿನಿಮಾದಲ್ಲಿದೆ ಎಂದು ಹೇಳಲಾಗುತ್ತಿದ್ದು, ವ್ಯಾಕ್ಸಿನ್ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಅಲ್ಲದೇ, ನೂರಕ್ಕೂ ನೂರರಷ್ಟು ಸತ್ಯ ಘಟನೆಗಳನ್ನೇ ಆಧರಿಸಿ ತಯಾರಾದ ಚಿತ್ರವೆಂದಿದ್ದಾರೆ ಅಗ್ನಿಹೋತ್ರಿ. ಅಷ್ಟೂ ಕಥೆಯಲ್ಲಿ ನೈಜ ಘಟನೆಗಳನ್ನೇ ಆಧರಿಸಿ ಚಿತ್ರಕಥೆ ಹೆಣೆಲಾಗಿದೆ ಎನ್ನುವುದು ನಿರ್ದೇಶಕರ ಮಾತು. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ ‘ಬಿಗ್ ಬಾಸ್’ ಖ್ಯಾತಿಯ ರಾಹುಲ್ ವೈದ್ಯ

ಮೊನ್ನೆಯಷ್ಟೇ ತಮ್ಮ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ (The Vaccine War) ಅನ್ನು ಕನ್ನಡದ ಸಿಲೆಬ್ರಿಟಿಗಳಿಗೆ ಪ್ರದರ್ಶನ ಏರ್ಪಡಿಸಿದ್ದರು ವಿವೇಕ್ ಅಗ್ನಿಹೋತ್ರಿ. ಈ ಸಂದರ್ಭದಲ್ಲಿ ಸಹಜವಾಗಿಯೇ ಅವರಿಗೊಂದು ಪ್ರಶ್ನೆ ತೂರಿ ಬಂತು. ನೀವು ವಿವಾದಕ್ಕಾಗಿ (Controversy) ಸಿನಿಮಾ ಮಾಡುತ್ತೀರಿ ಎಂದು ಪ್ರಶ್ನೆ ಮುಂದಿಡಲಾಗಿತ್ತು.

 

ಈ ಪ್ರಶ್ನೆಗೆ ಉತ್ತರಿಸಿದ ವಿವೇಕ್ ಅಗ್ನಿಹೋತ್ರಿ. ‘ನಾನು ವಿವಾದಕ್ಕಾಗಿ ಸಿನಿಮಾ ಮಾಡುವುದಿಲ್ಲ. ಹಾಗೆ ಮಾಡುವುದೇ ಆಗಿದ್ದರೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಪಾರ್ಟ್ 2 ಮಾಡುತ್ತಿದ್ದೆ. ಒಳ್ಳೆಯ ಉದ್ದೇಶ ಇಟ್ಟುಕೊಂಡು ಸಿನಿಮಾ ಮಾಡುವೆ. ಅದನ್ನು ವಿವಾದ ಮಾಡಲಾಗುತ್ತಿದೆ. ನನ್ನ ಉದ್ದೇಶ ನಿಜ ಸಂಗತಿಯನ್ನು ಹೇಳುವುದು ಅಷ್ಟೇ ಆಗಿದೆ’ ಎಂದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್