ಸುಪ್ರೀಂಕೋರ್ಟ್ ತೀರ್ಪನ್ನ ನಾವು ಪಾಲಿಸಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
1 Min Read

ಉಡುಪಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನ (Supreme Court) ತೀರ್ಪನ್ನ ನಾವು ಪಾಲಿಸಬೇಕು. ನೆಲ-ಜಲವನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದರು. ಬೇಗ ಮಳೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ರಾಜ್ಯ ಸರ್ಕಾರ ಎಲ್ಲಾ ವರದಿಗಳನ್ನು ಇಟ್ಟು ಸುಪ್ರೀಂ ನಲ್ಲಿ ವಾದ ಮಾಡಿದೆ ಎಂದರು.

ಇದೇ ವೇಳೆ ರಾಜ್ಯ ಸರ್ಕಾರದ ಬಳಿ ವೈಜ್ಞಾನಿಕ ವರದಿ ಇಲ್ಲ, ವಾದ ಮಂಡಿಸಿಲ್ಲ ಎಂಬ ಶೋಭಾ ಕರಂದ್ಲಾಜೆಯ (Shobha Karandlaje) ಆರೋಪಕ್ಕೆ ಪ್ರತಿಕ್ರಿಯಿಸಿ, ವಾದ ಹೇಗೆ ಮಾಡಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿಕೊಡಲಿ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಮಂಗಳವಾರ ಗೊಂದಲ ಇಲ್ಲದೇ ಬೆಂಗ್ಳೂರು ಬಂದ್ ಆಗ್ಬೇಕು: ಬಿಎಸ್‍ವೈ

ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಕೊಟ್ಟಿದ್ದೇವೆ. ಸರಕಾರದ ಕೆಲಸ ಕೈಗೆಟಕಲು ಜನತಾದರ್ಶನ ಯೋಜನೆ ರೂಪಿಸಿದ್ದೇವೆ. ಪ್ರತಿ ತಿಂಗಳು 25 ರಂದು ಜಿಲ್ಲಾಡಳಿತ ಜನತಾದರ್ಶನ ಸಭೆ ಮಾಡುತ್ತದೆ ಎಂದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್