ಕರ್ನಾಟಕದಲ್ಲಿ ‘ಜವಾನ್’ ಗಳಿಸಿದ್ದು ಬರೋಬ್ಬರಿ 50 ಕೋಟಿ ರೂಪಾಯಿ?

By
1 Min Read

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕಲೆಕ್ಷನ್ (Collection) ವಿಚಾರದಲ್ಲಿ ಸಾಕಷ್ಟು ದಾಖಲೆಗಳನ್ನು ಪುಡಿ ಪುಡಿ ಮಾಡುತ್ತಿದೆ. ಈಗಾಗಲೇ ವಿಶ್ವದ ಬಾಕ್ಸ್ ಆಫೀಸಿನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಅಚ್ಚರಿ ಮೂಡಿಸಿದೆ. ಕರ್ನಾಟಕದಲ್ಲೂ (Karnataka) ಜವಾನ್ ದಾಖಲೆ ಬರೆದಿದ್ದು, ಈವರೆಗೂ ಬಿಡುಗಡೆಯಾದ ಹಿಂದಿ ಚಿತ್ರಗಳು ಕಲೆಕ್ಷನ್ ಅನ್ನು ಜವಾನ್ ಮುರಿದು ಹಾಕಿದೆ.

ಕರ್ನಾಟಕವೊಂದರಲ್ಲೇ ಜವಾನ್ ಚಿತ್ರವು ಬರೋಬ್ಬರಿ 50 ಕೋಟಿ ರೂಪಾಯಿಯನ್ನು ಗಳಿಕೆ ಮಾಡಿದೆ ಎಂದು ಅಂದಾಜಿಸಲಾಗಿದೆ. ಈ ಹಿಂದೆ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ 45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ದಾಖಲೆಯ ಯಾದಿಯಲ್ಲಿತ್ತು. ಅದನ್ನು ಜವಾನ್ ಬ್ರೇಕ್ ಮಾಡಿದೆ.

ಸಾವಿರ ಕೋಟಿ ಕ್ಲಬ್

‘ಜವಾನ್’ ಸಿನಿಮಾ ದಾಖಲೆ ರೀತಿಯಲ್ಲಿ ಕಲೆಕ್ಷನ್ (Collection) ಮಾಡಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಿಸಿದಂತೆ 1004.92 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಅತೀ ವೇಗದಲ್ಲಿ ಸಾವಿರ ಕೋಟಿ ಕ್ಲಬ್ ಸೇರಿದ ಚಿತ್ರ ಎನ್ನುವ ದಾಖಲೆಗೂ ಕಾರಣವಾಗಿದೆ. ಕರ್ನಾಟಕದಲ್ಲೇ 563 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದರೆ, ವಿಶ್ವದಾದ್ಯಂತ 1004.92 ಕೋಟಿ ರೂಪಾಯಿ ಸಂಪಾದನೆ ಮಾಡಿದೆ.

ಸಿನಿಮಾ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಸಿನಿಮಾ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

 

ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್