ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

By
1 Min Read

ಬೆಂಗಳೂರು: ಅತ್ತಿಬೆಲೆಯಲ್ಲಿ (Attibele) ನಡೆದ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಘೋಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಶನಿವಾರ ರಾತ್ರಿಯೇ ಭೇಟಿ ನೀಡಿದ ಡಿಸಿಎಂ, ಸ್ಥಳ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗೋಡೌನ್‍ಗೆ ಅನುಮತಿ ಇರಲಿಲ್ಲ, ಅಂಗಡಿಗಷ್ಟೇ ಅನುಮತಿ ಇತ್ತು. ಕಾರ್ಮಿಕರಿಲ್ಲದೇ ಗ್ರಾಹಕರು ಕೂಡ ಸಿಲುಕಿರುವ ಶಂಕೆ ಇದೆ ಎಂದು ಹೇಳಿದರು.

ದುರಂತ ಸಂಬಂಧ ಅಗ್ನಿಶಾಮಕದಳ ಡಿಜಿಪಿ ಕಮಲ್ ಪಂಥ್ (Kamal Panth) ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಒಟ್ಟು 6 ಮಂದಿ ಗಾಯಗೊಂಡಿದ್ದಾರೆ. ಮೂವರು ಸೆಂಟ್ ಜಾನ್ಸ್, ಮೂವರು ಆಕ್ಸ್ ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾತನಾಡುವ ಪರಿಸ್ಥಿತಿಯಲ್ಲಿರುವವರ ಬಳಿ ಮಾಹಿತಿ ಪಡೆದಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಪಟಾಕಿ ದುರಂತಕ್ಕೆ ಕಾರಣ ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಪಟಾಕಿ ಅಂಗಡಿಗೆ ಬೆಂಕಿ – 13 ಕಾರ್ಮಿಕರು ಸಜೀವ ದಹನ

ಸದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿಕೆ ಆಗಿದೆ. ಪಟಾಕಿ ಶಾಪ್‍ನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ ಎನ್ನಲಾಗಿದೆ. ಗೋಡೌನ್‍ನ ಒಂದೇ ಸ್ಥಳದಲ್ಲಿ ಎಂಟು ಬಾಡಿಗಳು ಪತ್ತೆಯಾಗಿವೆ. ಪ್ರತ್ಯೇಕ ಎರಡು ಡೋರ್‍ಗಳಿರೋ ಸ್ಥಳದಲ್ಲಿ ನಾಲ್ಕು ನಾಲ್ಕು ಮಂದಿಯ ಮೃತದೇಹಗಳು ಸಿಕ್ಕಿವೆ. ಎಸ್‍ಡಿಆರ್‍ಎಫ್ ತಂಡದಿಂದ ಕಾರ್ಯಾಚರಣೆ ಮುಂದುವರಿದಿದೆ. ಕಾರ್ಯಾಚರಣೆ ಸ್ಥಳದಲ್ಲಿ ಪಟಾಕಿಗಳು ಸ್ಫೋಟಗೊಳ್ಳುತ್ತಿವೆ.

ಅತ್ತಿಬೆಲೆಯ ಆಕ್ಸ್ ಪಾರ್ಡ್ ಆಸ್ಪತ್ರೆಯಲ್ಲಿಯೇ 14 ಮೃತದೇಹಗಳು ಇದ್ದು, ಹೀಗಾಗಿ ಆಸ್ಪತ್ರೆ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆಸ್ಪತ್ರೆಯ ಮುಂದೆ ಕುಟುಂಬಸ್ಥರು ಗೋಳಾಡಿ ಕಣ್ಣೀರು ಹಾಕುತ್ತಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್