ವಿಜಯನಗರದಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ದುರ್ಮರಣ

Public TV
1 Min Read

ವಿಜಯನಗರ: ಇಲ್ಲಿನ ಹೊಸಪೇಟೆ (Hosapete) ಬಳಿ ಟಿಪ್ಪರ್‌ ಹಾಗೂ ಕ್ರೂಸರ್‌ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣಕ್ಕೀಡ ಘಟನೆ ನಡೆದಿದೆ.

ಹೊಸಪೇಟೆ ನಿವಾಸಿಗಳಾದ ಉಮಾ (45), ಕೆಂಚವ್ವ (60) ಭಾಗ್ಯ (32), ಅನಿಲ (30), ಗೋಣಿ ಬಸಪ್ಪ (65), ಭೀಮಲಿಂಗಪ್ಪ (49), ಬಾಲಕ ಯುವರಾಜ (4) ಮೃತ ದುರ್ದೈವಿಗಳು. ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

ಇವರು ದೇವಾಲಯಕ್ಕೆ ಹೋಗಿ ಕ್ರೂಸರ್‌ನಲ್ಲಿ ವಾಪಸ್‌ ಆಗುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್‌ ಎಕ್ಸಲ್‌ ಕಟ್‌ ಆಗಿ ಎರಡೂ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭೀಕರ ರಸ್ತೆ ಅಪಘಾತಕ್ಕೆ ಕ್ರೂಸರ್‌ನಲ್ಲಿದ್ದವರಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ. ಅಪಘಾತದ ತೀವ್ರತೆಗೆ ಕ್ರೂಸರ್‌ ಅಪ್ಪಚ್ಚಿಯಾಗಿತ್ತು. ಅದರಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟರು. ಇದನ್ನೂ ಓದಿ: ತ.ನಾಡಿಗೆ ಕಾವೇರಿ ನೀರು ಹರಿಸದಂತೆ ಮನವಿ – ಗಜೇಂದ್ರ ಸಿಂಗ್ ಭೇಟಿಯಾದ ರಾಜ್ಯ ರೈತರ ನಿಯೋಗ

ವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ವಿಜಯನಗರ ಎಸ್‌ಪಿ ಹೆಚ್ಚಿನ ಮಾಹಿತಿ ಕಲೆಹಾಕಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್