Olympics 2028: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ ಖಚಿತ – ಅಧಿಕೃತ ಘೋಷಣೆಯಷ್ಟೇ ಬಾಕಿ

Public TV
2 Min Read

ಮುಂಬೈ/ವಾಷಿಂಗ್ಟನ್‌: ಅಮೆರಿಕದ ಲಾಸ್​ ಏಂಜಲಿಸ್​ನಲ್ಲಿ 2028ಕ್ಕೆ (Olympics 2028) ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಟಿ20 ಕ್ರಿಕೆಟ್​ ಆಟ (Cricket Sports) ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ.

ಲಾಸ್‌ ಏಂಜಲಿಸ್​ ಒಲಿಂಪಿಕ್ಸ್ (Los Angeles Olympics Games)​ ಸಂಘಟನಾ ಸಮಿತಿ, ಈಗಾಗಲೆ ಕ್ರಿಕೆಟ್​ ಜೊತೆಗೆ ಫ್ಲ್ಯಾಗ್​ ಫುಟ್ಬಾಲ್​, ಬೇಸ್​ಬಾಲ್​ ಮತ್ತು ಸಾಫ್ಟ್​​ಬಾಲ್​ ಕ್ರೀಡೆಗಳನ್ನು ಹೊಸದಾಗಿ ಒಲಿಂಪಿಕ್ಸ್​ಗೆ ಸೇರ್ಪಡೆಗೊಳಿಸಲು ಈಗಾಗಲೇ ನಿರ್ಧರಿಸಿದ್ದು, ಅ.15, 16 ರಂದು ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: T20 WorldCup-2024 ಟೂರ್ನಿಯ ದಿನಾಂಕ ಬಹಿರಂಗ – USA, ವಿಂಡೀಸ್‌ ಆತಿಥ್ಯ

ಲಾಸ್​ ಏಂಜಲಿಸ್​ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಂಸ್ಥೆಯ ಆಯೋಗವು ಮುಂದಿನ ಭಾನುವಾರದಿಂದ ಮುಂಬೈನಲ್ಲಿ ನಡೆಯಲಿರುವ 141ನೇ IOC (ಭಾರತೀಯ ಒಲಿಂಪಿಕ್ಸ್‌ ಸಮಿತಿ) ಸಭೆಯಲ್ಲೂ ಈ ವಿಷಯವನ್ನು ತಿಳಿಸಲಿದೆ ಎನ್ನಲಾಗಿದೆ.

ಕ್ರಿಕೆಟ್​ ಈ ಮುನ್ನ 1990ರ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್​-ಫ್ರಾನ್ಸ್​ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲೂ ಮಹುಳಾ ಕ್ರಿಕೆಟ್‌ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್​ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ. ಇದನ್ನೂ ಓದಿ: World Cup 2023: ಅ.14 ರಂದು ಪಾಕ್‌ ವಿರುದ್ಧ ಹೈವೋಲ್ಟೇಜ್‌ ಕದನ – ಗಿಲ್‌ ಕಣಕ್ಕಿಳಿಯೋದು ಡೌಟ್‌

ಕ್ರಿಕೆಟ್ (Cricket)​ ಹೆಚ್ಚಿನ ಜನಪ್ರಿಯತೆ ಹೊಂದಿರುವ ಭಾರತ ಉಪಖಂಡದ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ ಆಯೋಜಕರು, ಇದರಿಂದಾಗಿ ನೇರಪ್ರಸಾರ ಹಕ್ಕಿನಿಂದ 1,526 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ಲೆಕ್ಕಾಚಾರ ಹೊಂದಿದ್ದಾರೆ. ಅದಕ್ಕಾಗಿ ಅಮೆರಿಕ, ವೆಸ್ಟ್‌ ಇಂಡೀಸ್‌ ಜೊತೆಗೆ ವಿಶ್ವಕಪ್‌ ಜಂಟಿ ಆತಿಥ್ಯ ವಹಿಸಿದೆ. ಇದನ್ನೂ ಓದಿ: ICC ಮಾಸ್ಟರ್ ಪ್ಲ್ಯಾನ್‌ – ಹೊಸ ಮಾದರಿಯಲ್ಲಿ 2024ರ T20 ವಿಶ್ವಕಪ್

ಮಾಹಿತಿ ಪ್ರಕಾರ, 2024ರ T20 ವಿಶ್ವಕಪ್‌ ಟೂರ್ನಿಯು ಮುಂದಿನ ಜೂನ್‌ 4 ರಿಂದ ಜೂನ್‌ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್‌ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್‌ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್‌ ಹಿಲ್‌, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ ಎಂದು ತಿಳಿಬಂದಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್