10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್‌; ಮತಾಂತರಕ್ಕೂ ಒತ್ತಾಯ – ಕೇಸ್‌ ದಾಖಲು

By
2 Min Read

ಲಕ್ನೋ: ಇತ್ತೀಚಿನ ದಿನಗಳಲ್ಲಿ ಕಾಮಕ್ಕೆ ಕಣ್ಣಿಲ್ಲ ಅನ್ನೋದು ಅನೇಕ ಪ್ರಕರಣಗಳಲ್ಲಿ ಸಾಬೀತಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಶಿಕ್ಷಕಿಯೊಬ್ಬಳು (Teacher) ತನ್ನದೇ ಶಾಲೆಯ ವಿದ್ಯಾರ್ಥಿಯನ್ನು (Student) ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಪ್ರಕರಣವೇ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ಹೌದು.. ಪಾಠ ಕಲಿಸಬೇಕಿದ್ದ ಶಿಕ್ಷಕಿಯೇ ವಿದ್ಯಾರ್ಥಿಗೆ ಪ್ರೇಮಪಾಠ ಹೇಳಿಕೊಡಲು ಶುರು ಮಾಡಿದ್ದಾಳೆ. ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಾ, ಮತಾಂತರಕ್ಕೂ ಒತ್ತಡ ಹೇರುತ್ತಿದ್ದ ಶಿಕ್ಷಕಿ ಇದೀಗ ಪೊಲೀಸರಿಗೆ (UP Police) ಸಿಕ್ಕಿಬಿದ್ದಿದ್ದಾಳೆ. ನನ್ನ ಮಗನನ್ನು ತನ್ನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದಳು, ಅಶ್ಲೀಲ ವಾಟ್ಸಪ್‌ ಮೆಸೇಜ್‌ಗಳನ್ನು ಕಳುಹಿಸುವ ಮೂಲಕ ಆತನನ್ನ ಸೆಕ್ಸ್‌ಗೆ ಪ್ರಚೋದಿಸುತ್ತಿದ್ದಳು. ಅಷ್ಟೇ ಅಲ್ಲದೇ ಮತಾಂತರಕ್ಕೂ ಒತ್ತಾಯಿಸುತ್ತಿದ್ದಳು ಎಂದು ಮಹಿಳಾ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಯ ತಂದೆ ದೂರು ದಾಖಲಿಸಿದ್ದಾರೆ.

ಮ್ಯಾಟರ್ ಕ್ಯಾಂಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉನ್ನಾವೋ ನಿವಾಸಿ ಕ್ಯಾಂಟ್ ಪ್ರದೇಶದ ಹೆಚ್ಚುವರಿ ಎಸ್ಪಿ ಬ್ರಿಜ್ ನಾರಾಯಣ ಸಿಂಗ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಳಿಕ ಅವರು ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಆ ಟೀಚರ್‌ ಮಾಡಿದ ಕೆಲಸವಾದರೂ ಏನು?
ಇಲ್ಲಿನ ಪ್ರತಿಷ್ಟಿತ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಅದೇ ಕಾಲೇಜಿನ ಮಹಿಳಾ ಶಿಕ್ಷಕಿಯೊಬ್ಬಳು (Female Teacher) ಲೈಂಗಿಕತೆಗೆ ಪ್ರಚೋದಿಸಿದ್ದಾರೆ. ಮೊದಲು ರಾತ್ರಿಯಿಡಿ ಫೋನ್‌ನಲ್ಲಿ ಹರಟೆ ಕೊಚ್ಚುತ್ತಿದ್ದ ಶಿಕ್ಷಕಿ, ಬಳಿಕ ವಿದ್ಯಾರ್ಥಿಯನ್ನ ಲೈಗಿಂಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾಳೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಯನ್ನ ಮತಾಂತರಕ್ಕೂ ಒತ್ತಾಯಿಸಿದ್ದಾಳೆ. ಶಿಕ್ಷಕಿಯ ಪತಿ ಮತ್ತು ಸಹೋದರ ಅದೇ ಶಾಲೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಅವರೂ ಸಹ ವಿದ್ಯಾರ್ಥಿಯ ಮತಾಂತರಕ್ಕೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ನಡೆಸಿದ ಚಾಟಿಂಗ್‌ ಸ್ಕ್ರೀನ್‌ಶಾಟ್‌ಗಳನ್ನ ಪೊಲೀಸರಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮತಾಂತರಕ್ಕೆ ಒತ್ತಡ ಹೇರಿರುವ ಬಗ್ಗೆಯೂ ಸಾಕ್ಷಿಗಳನ್ನ ನೀಡುವಂತೆ ಪೊಲೀಸರು ಕೇಳಿದ್ದಾರೆ. ಆದ್ರೆ ಈ ವಿಷಯ ಪ್ರಸ್ತಾಪದ ಚಾಟಿಂಗ್‌ಗಳನ್ನ ವಿದ್ಯಾರ್ಥಿ ಡಿಲೀಟ್‌ ಮಾಡಿರುವುದರಿಂದ ಲೈಂಗಿಕತೆಗೆ ಒತ್ತಾಯಿಸುತ್ತಿದ್ದರು ಎನ್ನುವ ಆರೋಪದ ಮೇಲೆ ತನಿಖೆ ನಡೆಯುತ್ತಿದೆ.

ವಿದ್ಯಾರ್ಥಿ ತಂದೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್