ಬಾಳೆಹಣ್ಣಿನ ಸಿಪ್ಪೆಯಲ್ಲಿ ಮೈ ಮುಚ್ಚಿಕೊಂಡ ಉರ್ಫಿಗೆ ನೆಟ್ಟಿಗರಿಂದ ತರಾಟೆ

By
1 Min Read

ಬಾಲಿವುಡ್ (Bollywood) ಬ್ಯೂಟಿ ಉರ್ಫಿ ಜಾವೇದ್ (Urfi Javed) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಭಿನ್ನ ಭಿನ್ನ ಕಾಸ್ಟ್ಯೂಮ್ ಧರಿಸಿ ಕ್ಯಾಮೆರಾ ಮುಂದೆ ಬರುತ್ತಾರೆ. ಅವರ ವಿಚಿತ್ರ ಉಡುಗೆಯೇ ಅನೇಕ ಬಾರಿ ಟ್ರೋಲ್‌ಗರ ಬಾಯಿಗೆ ಆಹಾರವಾಗಿದ್ದು ಇದೆ. ಈಗ ಬಾಳೆಹಣ್ಣಿನ ಸಿಪ್ಪೆಯಲ್ಲಿ ಉರ್ಫಿ ಮೈ ಮುಚ್ಚಿಕೊಂಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಬಟ್ಟೆ ವಿಚಾರದಲ್ಲಿ ಸದಾ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಉರ್ಫಿ, ಇದೀಗ ಬಾಳೆ ಹಣ್ಣಿನ ಸಿಪ್ಪೆಯಿಂದ ಮೈ ಮುಚ್ಚಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಬಾಳೆಹಣ್ಣು ತಿನ್ನುತ್ತ ಫೋಟೋಶೂಟ್ ಮಾಡಿಸಿದ್ದಾರೆ. ಉರ್ಫಿ ಅವತಾರ ನೋಡಿ ಧರಿಸೋಕೆ ಬೇರೆ ಏನು ಸಿಗಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಒಟಿಟಿಯಿಂದ ಉರ್ಫಿ ಜಾವೇದ್ ಜನಪ್ರಿಯತೆ ಗಳಿಸಿದರು. ಹೌಸ್ ಅರೆಸ್ಟ್ ಗೇಮ್ ರಿಯಾಲಿಟಿ ಶೋನ ಮೊದಲ ಸೀಸನ್‌ನಲ್ಲಿಯೂ ಅವರು ಭಾಗವಹಿಸಿದ್ದರು. ಇದನ್ನೂ ಓದಿ:‘ಸೀತಾರಾಮಂ’ ನಟಿ ಲಿಪ್‌ಲಾಕ್ ಮಾಡಿದ್ದಕ್ಕೆ ಫ್ಯಾನ್ಸ್ ಅಸಮಾಧಾನ

ಈ ಹಿಂದೆ ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದ ಉರ್ಫಿ, ಬಿಗ್ ಬಾಸ್ ಒಟಿಟಿ ಸೀಸನ್ 1ರಲ್ಲಿ (Bigg Boss) ಟಾಸ್ಕ್ ಗೆಲ್ಲಲು ಕಸದ ಚೀಲಗಳಿಂದ ಮಾಡಿದ ಉಡುಪನ್ನು ಧರಿಸಿ ಖ್ಯಾತಿ ಗಳಿಸಿದರು. ತಮ್ಮ ಸೃಜನಶೀಲತೆಗೆ ಮೆಚ್ಚುಗೆ ಪಡೆದರು. ಅಂದಿನಿಂದ ಉರ್ಫಿ ಸಾಮಾನ್ಯ ಉಡುಗೆಯನ್ನು ಧರಿಸಲೇ ಇಲ್ಲ. ಹಾಗಾಗಿ ನಟಿ ನಿರಂತರವಾಗಿ ಟ್ರೋಲ್ ಆಗಿದ್ದರು.

ಕೆಲವು ಜನರು ನನ್ನನ್ನು ಗೌರವಿಸುವುದಿಲ್ಲ. ನನ್ನೊಂದಿಗೆ ಕೆಲಸ ಮಾಡಲು ಯಾರೂ ಬಯಸುವುದಿಲ್ಲ. ನಾನು ಎಲ್ಲರ ಗಮನ ಸೆಳೆಯುವ ಸಲುವಾಗಿಯೇ ಈ ರೀತಿಯ ಬಟ್ಟೆಗಳನ್ನು ಧರಿಸುವುದು ಎಂದು ಉರ್ಫಿ ಒಪ್ಪಿಕೊಂಡಿದ್ದರು. ಆದರೆ ಈ ಕುರಿತು ಕಾಮೆಂಟ್ ಮಾಡಿದರೆ ನನಗೆ ಇಷ್ಟ ಆಗುವುದಿಲ್ಲ ಎಂದು ನಟಿ ಹೇಳಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್