ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Public TV
1 Min Read

– ಡಿಸಿಎಂ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ (Disproportionate Assets Case)  ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ (CBI) ತನಿಖೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇದನ್ನೂ  ಓದಿ: ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ

ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.

 

ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.  ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್