ಸಿಡಿಮದ್ದು ತಾಲೀಮು ವೇಳೆ ಅವಘಡ- ವ್ಯಕ್ತಿ ಆಸ್ಪತ್ರೆಗೆ ದಾಖಲು

By
1 Min Read

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023 (Mysuru Dasara 2023) ಬಹಳ ಅದ್ಧೂರಿಯಿಂದ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ನಡೆದಿದೆ.

ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯಗಳಾದ ಘಟನೆ ಭಾನುವಾರ ಪುಷ್ಪಾರ್ಚನೆ ರಿಹರ್ಸಲ್ ವೇಳೆ ನಡೆದಿದೆ. ನಿನ್ನೆ ಸಂಜೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ರಿಹರ್ಸಲ್ ನಡೆಸಲಾಗಿತ್ತು.

ಈ ವೇಳೆ ರಾಷ್ಟ್ರಗೀತೆ ನುಡಿಸಿ 21 ಸುತ್ತು ಕುಶಾಲತೋಪು ಸಿಡಿಸಲಾಗಿತ್ತು. ಈ ಕುಶಾಲತೋಪು ಸಿಡಿದು ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್