World Cup 2023: ಸಿಕ್ಸರ್‌ನಿಂದಲೇ ಮತ್ತೊಂದು ದಾಖಲೆ ಬರೆದ ಸಿಕ್ಸರ್ ಶರ್ಮಾ

Public TV
1 Min Read

ಧರ್ಮಶಾಲಾ: ಟೀಂ ಇಂಡಿಯಾ (Team India) ಬ್ಯಾಟರ್‌ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (ODI) ಭಾರತದ ಪರ 300ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದ ರೋಹಿತ್ ಶರ್ಮಾ (Rohit Sharma) ಇದೀಗ ಸಿಕ್ಸರ್ ನಿಂದಲೇ ಮತ್ತೊಂದು ದಾಖಲೆ ಸಿಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಭಾನುವಾರ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 40 ಎಸೆತಗಳಲ್ಲಿ 46 ರನ್ ಬಾರಿಸಿದ ರೋಹಿತ್ ಶರ್ಮಾ 4 ಬೌಂಡರಿ, 4 ಸಿಕ್ಸರ್‌ಗಳನ್ನೂ ಸಿಡಿಸಿದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಭಾರತದ ನಂ.1 ಬ್ಯಾಟರ್ ಹಾಗೂ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ, ಶಮಿ ಮಿಂಚು; 20 ವರ್ಷಗಳ ನಂತರ ಕಿವೀಸ್‌ ಮಣಿಸಿದ ಭಾರತ

2015ರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ (AB de Villiers) 58 ಸಿಕ್ಸರ್‌ ಹಾಗೂ 2019ರ ವರ್ಷದಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕ್ರಿಸ್‌ ಗೇಲ್ 56 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 2023ರಲ್ಲಿ ರೋಹಿತ್ ಶರ್ಮಾ 53 ಸಿಕ್ಸರ್ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಶಮಿ ಹೊಸ ದಾಖಲೆ – ODI ವಿಶ್ವಕಪ್‌ ಇತಿಹಾಸದಲ್ಲೇ 2 ಬಾರಿ ಐದು ವಿಕೆಟ್‌ ಕಬಳಿಸಿದ ಮೊದಲ ಭಾರತೀಯ

ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 273 ರನ್‌ಗಳಿಗೆ ಸರ್ವಪತನ ಕಂಡಿತ್ತು. ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 48 ಓವರ್‌ಗಳಲ್ಲೇ 6 ವಿಕೆಟ್ ನಷ್ಟಕ್ಕೆ 274 ರನ್ ಸಿಡಿಸಿ ದಾಖಲೆ ಬರೆಯಿತು. ಇದನ್ನೂ ಓದಿ: ರೋಹಿತ್‌ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್‌ ಹಿಂದಿಕ್ಕಿದ ಭಾರತ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್