ದಸರಾ ಹಬ್ಬದ ಸಂಭ್ರಮದಲ್ಲಿ ಯಶ್- ರಾಧಿಕಾ ದಂಪತಿ

Public TV
1 Min Read

ಲ್ಲೆಲ್ಲೂ ದಸರಾ (Dasara) ಹಬ್ಬದ ಸಂಭ್ರಮ ಮನೆ ಮಾಡಿದೆ. ‘ಕೆಜಿಎಫ್’ (KGF) ಸೂಪರ್ ಸ್ಟಾರ್ ಯಶ್ (Yash) ದಂಪತಿ ಮನೆಯಲ್ಲಿಯೂ ಹಬ್ಬದ ಸಡಗರ ಜೋರಾಗಿದೆ. ಕುಟುಂಬದ ಜೊತೆ ಗ್ರ್ಯಾಂಡ್‌ ಆಗಿ ರಾಕಿ ಭಾಯ್‌ ಹಬ್ಬ ಸೆಲೆಬ್ರೇಟ್‌ ಮಾಡಿದ್ದಾರೆ.

ಯಶ್-ರಾಧಿಕಾ (Radhika Pandit) ಮನೆಯಲ್ಲಿ ನವರಾತ್ರಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ಸುಂದರ ಫೋಟೋಗಳನ್ನ ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಶ್ ಕಂದು ಬಣ್ಣದ ಧಿರಿಸಿನಲ್ಲಿ ಮಿಂಚಿದ್ದರೆ, ರಾಧಿಕಾ ಆಕಾಶ ನೀಲಿ ಬಣ್ಣದ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

‘ಕೆಜಿಎಫ್ 2’ (KGF 2) ಬಳಿಕ ಯಶ್ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಅದ್ಯಾವಾಗ ರಾಕಿ ಭಾಯ್ ಮುಂದಿನ ಚಿತ್ರದ ಅಪ್‌ಡೇಟ್ ಕೊಡುತ್ತಾರೆ ಎಂದು ಕಾಯುತ್ತಿದ್ದಾರೆ. ಇದನ್ನೂ ಓದಿ:ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

ಸದ್ಯ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಅದಕ್ಕಾಗಿ ವಿದೇಶಕ್ಕೂ ಯಶ್‌ ಭೇಟಿ ನೀಡಿದ್ದಾರೆ. ಹಾಗಾದ್ರೆ ಸಿನಿಮಾ ಬಗ್ಗೆ ಸದ್ಯದಲ್ಲೇ ಗುಡ್‌ ನ್ಯೂಸ್‌ ಕೊಡುತ್ತಾರಾ ಕಾದುನೋಡಬೇಕಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್