‘ಕ್ಯಾಪ್ಚರ್’ನಲ್ಲಿ ಪ್ರಿಯಾಂಕಾ ಮಗಳಾದ ಮಾನ್ವಿತಾ

Public TV
2 Min Read

ಸ್ಯಾಂಡಲ್‌ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ (Manvita Kamat) ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್‌ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್  (Lohit) ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ (Priyanka) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ.

ಕ್ಯಾಪ್ಚರ್ (Capture) ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ  ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ.

‘ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಮೊದಲ ತುಂಬಾ ಭಯವಿತ್ತು. ಆದರೆ ಪಾತ್ರ ಚೆನ್ನಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ. 15 ದಿನಗಳು ಗೋವಾದಲ್ಲಿ ಶೂಟಿಂಗ್ ಮಾಡಿದ್ವಿ, ಪ್ರಿಯಾಂಕಾ ಮೇಡಮ್ ಜೊತೆ ಕೆಲಸ ಮಾಡಿದ್ದು ತುಂಬಾ ಇಷ್ಟವಾಯಿತು. ಶೂಟಿಂಗ್ ಮುಗಿಸಿ ಮನೆಗೆ ಬಂದಾಗ ತುಂಬಾ ದೃಷ್ಟಿ ಆಗಿತ್ತು ಅನಿಸುತ್ತೆ. ಜ್ವರ ಕೂಡ ಬಂದಿತ್ತು. ದೃಷ್ಟಿ ತೆಗಿಸಿಕೊಂಡ ಮೇಲೆ ಸರಿ ಆಯಿತು’ ಎಂದು ಹೇಳಿದರು.

ಮಾನ್ವಿತಾ ಕೊನೆಯದಾಗಿ ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ವರ್ಷದ ಬಳಿಕ ತೆರೆಮೇಲೆ ಬರುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದಲ್ಲಿ ಮಾನ್ವಿತಾ ಲುಕ್ ಹೇಗಿರಲಿದೆ ಎನ್ನುವುದು ಸದ್ಯದಲ್ಲೇ ರಿವೀಲ್ ಆಗಲಿದೆ.  ಕ್ಯಾಪ್ಚರ್ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ  ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ  ಸಿನಿಮಾ ಇದಾಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್