IPL 2024 – ದುಬೈನಲ್ಲಿ ಹರಾಜು

Public TV
1 Min Read

ಮುಂಬೈ: 2024ರ 17ನೇ ಆವೃತ್ತಿಯ ಐಪಿಎಲ್  (IPL 2024) ಹರಾಜು ಈ ಬಾರಿ ದುಬೈನಲ್ಲಿ (Dubai) ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ 15 ಮತ್ತು 19ರ ನಡುವೆ ಆಟಗಾರರ ಹರಾಜು ನಡೆಯಲಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಬಿಸಿಸಿಐ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

ಐಪಿಎಲ್ ಹರಾಜಿಗೆ ಸಂಬಂಧಿಸಿದಂತೆ ಬಿಸಿಸಿಐ (BCCI) ಯಾವುದೇ ಅಧಿಕೃತ ಮಾಹಿತಿಯನ್ನು ಫ್ರಾಂಚೈಸಿಗಳಿಗೆ ಕಳುಹಿಸಿಲ್ಲ. ಈ ಹರಾಜು ದುಬೈನಲ್ಲಿ ನಡೆಯಲಿದೆ ಎಂಬ ಚರ್ಚೆ ಜೋರಾಗಿದೆ. ಐಪಿಎಲ್ ಹರಾಜು ಡಿಸೆಂಬರ್ 18 ಅಥವಾ 19 ರಂದು ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Breaking: ಕರ್ನಾಟಕ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಕ್ಕೆ ಧೋನಿ, ಸಚಿನ್ ಆಗಮನ

16ನೇ ಆವೃತ್ತಿಯ ಹರಾಜನ್ನು ಇಸ್ತಾಂಬುಲ್‍ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಅಂತಿಮವಾಗಿ ಕೊಚ್ಚಿಯಲ್ಲಿ ಹರಾಜು ನಡೆದಿತ್ತು.

ಈ ಬಾರಿ ಕೂಡ ಮಹಿಳೆಯರ ಪ್ರೀಮಿಯರ್ ಲೀಗ್ ನಡೆಯಲಿದ್ದು, ಆಟಗಾರ್ತಿಯರ ಹರಾಜು ಪ್ರಕ್ರಿಯೆ ಡಿಸೆಂಬರ್ 9 ರಂದು ನಡೆಸಲು ಯೋಜನೆ ರೂಪಿಸಲಾಗಿದೆ. ಇದರ ಹರಾಜು ಪ್ರಕ್ರಿಯೆಯ ಸ್ಥಳ ಇನ್ನೂ ನಿಗದಿಯಾಗಿಲ್ಲ. ಇದನ್ನೂ ಓದಿ: 27 ರನ್‌ ಅಂತರದಲ್ಲಿ 5 ವಿಕೆಟ್‌ ಉಡೀಸ್‌, ಇಂಗ್ಲೆಂಡ್‌ಗೆ ಹೀನಾಯ ಸೋಲು – ಲಂಕಾಗೆ 8 ವಿಕೆಟ್‌ಗಳ ಜಯ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್