ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯ

Public TV
1 Min Read

ಯಾದಗಿರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್‍ಡಿಎ ಪರೀಕ್ಷೆಯ (FDA Exam) ಅಕ್ರಮದ ಬಗ್ಗೆ 15 ದಿನಗಳ ಮೊದಲೇ ಸಚಿವ ಪ್ರಿಯಾಂಕ್ ಖರ್ಗೆ (Mallikarjun Kharge) ಅವರಿಗೆ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಸಂಘದ ಮುಖಂಡ ರವಿಶಂಕರ್ ಮಾಲೀಪಾಟೀಲ್ ಗಮನಕ್ಕೆ ತಂದಿದ್ದರು ಎಂಬ ವಿಚಾರ ತಿಳಿದು ಬಂದಿದೆ.

ಪರೀಕ್ಷೆಗಳಲ್ಲಿ ಬ್ಲೂಟೂತ್ ದುರ್ಬಳಕೆ ಜೊತೆಗೆ ಪಿಎಸ್‍ಐ ಅಕ್ರಮ ಮಾದರಿಯಲ್ಲೇ ಉತ್ತರಗಳ ಜಾಗ ಖಾಲಿ ಬಿಟ್ಟು ನಂತರ ತುಂಬುವ ಸಂಚು ನಡೆಯುತ್ತಿದೆ. ಇದನ್ನು ತಡೆಗಟ್ಟಬೇಕೆಂದು ರವಿಶಂಕರ್ ಅ.13 ರಂದು ಸಚಿವ ಪ್ರಿಯಾಂಕ ಖರ್ಗೆ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಹೆಚ್‌ಡಿಕೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್‌ಸಿ ಬಾಲಕೃಷ್ಣ

ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಮಾದರಿಯಲ್ಲೇ, ವಿವಿಧ ನಿಗಮ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ. ಈ ಅಕ್ರಮದ ಸುಳಿವಿದ್ದರೂ ಕೂಡ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದ್ದ ಪ್ರಾಧಿಕಾರ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಪ್ರಕರಣದಲ್ಲಿ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತಪಡಿಸಿದ್ದ ರವಿ ಶಂಕರ್ ಅಕ್ರಮ ತಡೆಗಟ್ಟಬೇಕೆಂದು ಮನವಿ ಮಾಡಿದ್ದರು. ಇದೀಗ ತಪಾಸಣೆಯಲ್ಲೂ ನಿರ್ಲಕ್ಷವಹಿಸಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿದೆ. ಇದನ್ನೂ ಓದಿ: ಬ್ಲೂಟೂತ್ ಬಳಸಿ ಕೆಪಿಎಸ್‍ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ವಶಕ್ಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್