ಕಾಂಗ್ರೆಸ್‌ ನಾಯಕನ ಬರ್ಬರ ಹತ್ಯೆ – ಮಂಗಳವಾರ ಶ್ರೀನಿವಾಸಪುರ ಬಂದ್

Public TV
1 Min Read

ಕೋಲಾರ :  ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ (M Srinivas Murder Case) ಸಂಬಂಧ ಮಂಗಳವಾರ ಶ್ರೀನಿವಾಸಪುರ ಬಂದ್‌ಗೆ (Srinivaspura Bandh) ಕರೆ ನೀಡಲಾಗಿದೆ.

ಹತ್ಯೆ ಅರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಹಾಗೂ ಗಡಿಪಾರು ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ತಾಲೂಕು ಬಂದ್‌ಗೆ ದಲಿತ ಪರ ಹಾಗೂ ಪ್ರಗತಿಪರ ಸಂಘಟನೆಗಳು ಕರೆ ನೀಡಿವೆ.

 

ಹಳೆ ದ್ವೇಷದ ಹಿನ್ನೆಲೆ 6 ಮಂದಿ ಅ.22 ರಂದು ಶ್ರೀನಿವಾಸಪುರದ ಬಳಿ ಶ್ರೀನಿವಾಸ್‌ ಅವರನ್ನು ಹತ್ಯೆ ಮಾಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಸಹ ಆರೋಪಿಗಳನ್ನು ಪತ್ತೆ ಹಚ್ಚಿ ಕಾಲಿಗೆ ಗುಂಡು ಹಾರಿಸಿದ್ದರು. ಅದರಂತೆ ಶ್ರೀನಿವಾಸ್ ಕೊಲೆ ಪ್ರಕರಣ ಅಂತ್ಯವಾಗಿತ್ತು. ಆದರೆ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ನಾಳೆ ಶ್ರೀನಿವಾಸಪುರ ಬಂದ್‌ಗೆ ಕರೆ ನೀಡಲಾಗಿದೆ. ಪಕ್ಷಾತೀತವಾಗಿ ತಾಲೂಕಿನ ಜನರು ಮುಖಂಡನ ಕೊಲೆ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಮುಂದಿನ 15 ದಿನ ನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ – ಕರ್ನಾಟಕಕ್ಕೆ CWRC ನಿರ್ದೇಶನ

ಕೌನ್ಸಿಲರ್‌ ಸೀನಣ್ಣ ಎಂದೇ ಖ್ಯಾತಿ ಪಡೆದಿದ್ದ ಶ್ರೀನಿವಾಸ್ ದಲಿತ ನಾಯಕರಾಗಿದ್ದರು. ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷರಾಗಿದ್ದ ಅವರು ಶ್ರೀನಿವಾಸಪುರ ಪುರಸಭೆ ಸದಸ್ಯರಾಗಿ, ಎಪಿಎಂಸಿ ಅಧ್ಯಕ್ಷರಾಗಿಯೂ ಆಯ್ಕೆ ಆಗಿದ್ದರು. ಅಲ್ಲದೇ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿದ್ದ ಶ್ರೀನಿವಾಸ್ ಕೊಲೆಯಾಗಿದ್ದು ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್