ನಮ್ಮ ಬಸ್‌ಗೆ ಹಾನಿ ಮಾಡಿದವರ ಮೇಲೆ ಕ್ರಮ, ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವೆ: ರಾಮಲಿಂಗಾರೆಡ್ಡಿ

Public TV
2 Min Read

ರಾಮನಗರ: ಮಹಾರಾಷ್ಟ್ರದಲ್ಲಿ (Maharashtra) ಕರ್ನಾಟಕದ (Karnataka) ಬಸ್ (Bus) ಸುಟ್ಟಿರುವ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೇಳಲಾಗಿದೆ. ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಪತ್ರ ಬರೆಯಲು ನಮ್ಮ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಪುಂಡಾಟ ಮೆರೆದಿರುವ ವಿಚಾರದ ಕುರಿತು ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಎಂಇಎಸ್‌ನವರು ಹಿಂದೆ ನಾಲ್ಕೈದು ಜನ ಗೆಲ್ಲೋರು. ಈಗ ನಗರ ಪಾಲಿಕೆಯಲ್ಲೂ ಅವರು ಗೆಲ್ಲುತ್ತಿಲ್ಲ, ಎಲ್ಲಾ ಕಡೆ ಸೋಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅವರ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವೆಡೆ ಬಸ್ ಸುಟ್ಟಿದ್ದಾರೆ. ಬಸ್ ಸುಡೋದಕ್ಕೂ, ಮೀಸಲಾತಿಗೂ ಯಾವುದೇ ಸಂಬಂಧ ಇಲ್ಲ. ಅವರು ಮೀಸಲಾತಿಗೆ ಹೋರಾಟ ಮಾಡಿಕೊಳ್ಳಲಿ. ಆದರೆ ಈ ರೀತಿಯ ಉದ್ಧಟತನ ಸರಿಯಿಲ್ಲ ಎಂದು ಕಿಡಿಕಾರಿದರು.

ನಮ್ಮ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಪತ್ರ ಬರೆಯಲು ಹೇಳಿದ್ದೇವೆ. ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಪತ್ರ ಬರೆಯಲಿದ್ದಾರೆ. ಯಾರು ಬಸ್ ಸುಟ್ಟಿದ್ದಾರೆ ಅವರ ವಿರುದ್ಧ ಕ್ರಮಕ್ಕೆ ಹೇಳಿದ್ದೇನೆ. ಅವರ ಬಸ್‌ಗಳು ಕೂಡಾ ನಮ್ಮ ಕಡೆ ಬರುತ್ತಲ್ಲ, ನಮ್ಮವರು ಏನಾದ್ರೂ ಮಾಡ್ತಾರಾ? ಮೀಸಲಾತಿ ಹೋರಾಟ ಅವರ ಆಂತರಿಕ ವಿಚಾರ. ಆದರೆ ನಮ್ಮ ಬಸ್‌ಗಳಿಗೆ ಹಾನಿ ಮಾಡ್ತಿರೋದು ತಪ್ಪು. ಯಾರೋ ಕಿಡಿಗೇಡಿಗಳು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಆಗುತ್ತದೆ ಎಂದರು. ಇದನ್ನೂ ಓದಿ: ವನ್ಯಜೀವಿಗಳ ವಸ್ತುಗಳನ್ನಿಟ್ಟುಕೊಂಡವರು 2-3 ತಿಂಗಳಲ್ಲಿ ವಾಪಸ್ ಮಾಡಬೇಕು: ಡೆಡ್‌ಲೈನ್ ನೀಡಿದ ಖಂಡ್ರೆ

ಪ್ರತ್ಯೇಕ ರಾಜ್ಯದ ಬಗ್ಗೆ ಕೆಲವರ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತ್ಯೇಕ ರಾಜ್ಯ ಅನ್ನೋದು ಮುಗಿದ ಕಥೆ. ಕನ್ನಡ ಮಾತನಾಡುವ ಭಾಷಿಗರೆಲ್ಲಾ ಒಂದೇ. ರಾಜ್ಯ ಸ್ಥಾಪನೆ ಆಗಿ ಈಗಾಗಲೇ 67 ವರ್ಷ ಮುಗಿದಿದೆ. ಪ್ರತ್ಯೇಕ ರಾಜ್ಯದ ಪ್ರಶ್ನೆಯೇ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ನಿಷ್ಠಾವಂತರು, ಸಿಎಂ ಆಗಲು ಅರ್ಹರಿದ್ದಾರೆ – ಸಚಿವ ಕೆ.ಎನ್ ರಾಜಣ್ಣ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್