ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ಓರ್ವ ಸಾವು, 8 ಮಂದಿ ಗಂಭೀರ

By
1 Min Read

ಚಿತ್ರದುರ್ಗ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ (Accident) ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರಿನ ಕೆ.ಆರ್ ಹಳ್ಳಿಯ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಂಜಣ್ಣ (45) ಎಂದು ಗುರುತಿಸಲಾಗಿದ್ದು, ಇವರು ತುಮಕೂರು (Tumkur) ಮೂಲದ ಶಿರಾದವನು ಎನ್ನಲಾಗಿದೆ. ಅಡಿಕೆ ಕೊಯ್ಯುವ ಕೆಲಸಕ್ಕೆಂದು 9 ಜನ ಕಾರ್ಮಿಕರು ಟ್ರಾಕ್ಟರ್‌ನಲ್ಲಿ ಹಿರಿಯೂರಿಗೆ ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್‌ನಲ್ಲಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಂಜಣ್ಣ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಲ್ಲದೇ ಉಳಿದ 8 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಜರಂಗ ಬಲಿ ಗದೆಯೇ ತಾಲಿಬಾನ್‍ಗಳಿಗೆ ಪರಿಹಾರ: ಯೋಗಿ ಆದಿತ್ಯನಾಥ್

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಲಾರಿ ಚಾಲಕನ ಮಿತಿ ಮೀರಿದ ವೇಗವೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಮ್ಮನನ್ನು ನಿಂದಿಸ್ತಿದ್ದ ಮಾವನನ್ನೇ ಕೊಂದ ಅಳಿಯ!

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್