ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್‌ ಕುಮಾರ್‌ ಬೇಸರ

Public TV
1 Min Read

ಪಾಟ್ನಾ: ಐಎನ್‌ಡಿಐಎ (INDIA) ಮೈತ್ರಿಕೂಟ ಯಾವುದೇ ಪ್ರಗತಿ ಕಾಣುತ್ತಿಲ್ಲ. ಕಾಂಗ್ರೆಸ್‌ (Congress) ಪಂಚರಾಜ್ಯ ಚುನಾವಣೆ ಕಡೆಗೆ ಮಾತ್ರ ತನ್ನ ಗಮನ ಕೇಂದ್ರೀಕರಿಸಿದೆ ಎಂದು ಬಿಹಾರ್‌ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ದೂಷಿಸಿದ್ದಾರೆ.

ಪಾಟ್ನಾದಲ್ಲಿ ನಡೆದ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಸಿಪಿಐ) ರ‍್ಯಾಲಿಯಲ್ಲಿ ಅವರು ಮಾತನಾಡಿದರು. ಈ ವೇಳೆ 2024 ರ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ಪ್ರಗತಿಯ ಕೊರತೆಗೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದರು. ಇದರಿಂದ ಇಂಡಿಯಾ ಬಣದ ಭವಿಷ್ಯದ ಬಗ್ಗೆ ಊಹಾಪೋಹಗಳು ಉಲ್ಬಣಗೊಂಡಿದೆ. ಇದನ್ನೂ ಓದಿ: Breaking: ಲಂಚ ಪಡೆಯುವಾಗಲೇ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ED ಅಧಿಕಾರಿಗಳು ಅರೆಸ್ಟ್‌

ನಾವು ಅವರೊಂದಿಗೆ (ಕಾಂಗ್ರೆಸ್) ಮಾತನಾಡುತ್ತಿದ್ದೇವೆ. ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವಂತೆ‌ ಅವರನ್ನು ಪ್ರೇರೇಪಿಸುತ್ತಿದ್ದೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂಡಿಯಾ ಒಕ್ಕೂಟದಲ್ಲಿ ಹೆಚ್ಚಿನ ಪ್ರಗತಿ ಕಂಡುಬಂದಿಲ್ಲ. ಐದು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹೆಚ್ಚು ಆಸಕ್ತಿ ತೋರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾವು ಕಾಂಗ್ರೆಸ್‌ಗೆ ಪ್ರಮುಖ ಪಾತ್ರವನ್ನು ನೀಡಲು ಒಪ್ಪಿಕೊಂಡಿದ್ದೇವೆ. ಆದರೆ ಅವರು ಪಂಚರಾಜ್ಯ ಚುನಾವಣೆಯ ನಂತರವೇ ಮುಂದಿನ ಸಭೆಯನ್ನು ಕರೆಯುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ ಬೆದರಿಕೆ ಕರೆ

ಇಂಡಿಯಾ ಮೈತ್ರಿಕೂಟ ಕೊನೆಯ ಸಭೆ ಮುಂಬೈನಲ್ಲಿ ಆ.31 ಹಾಗೂ ಸೆ.1 ರಂದು ನಡೆಯಿತು. ನಂತರ ಮುಂದಿನ ದಿನಾಂಕ ನಿಗದಿಪಡಿಸಲಾಗುವುದು ಎಂದು ಕಾಂಗ್ರೆಸ್‌ ಘೋಷಿಸಿತು. ಮುಂದಿನ ಸಭೆ ದೆಹಲಿಯಲ್ಲಿ ನಡೆಯಬಹುದು ಎಂಬ ಮಾತುಗಳು ಸಹ ಕೇಳಿಬಂದವು. ಆದರೆ ಇದುವರೆಗೂ ಯಾವುದೇ ಸುದ್ದಿ ಹೊರಬಂದಿಲ್ಲ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್