‘5 ವರ್ಷ ನಾನೇ ಸಿಎಂ’ ಹೇಳಿಕೆಯಿಂದ ಯೂಟರ್ನ್ ಹೊಡೆದ ಸಿದ್ದರಾಮಯ್ಯ

Public TV
1 Min Read

ಗದಗ: 5 ವರ್ಷ ನಾನೇ ಸಿಎಂ ಎಂದು ಹೇಳಿದ್ದ ಸಿದ್ದರಾಮಯ್ಯ (Siddaramaiah) ಇದೀಗ ಯೂ ಟರ್ನ್ ಹೊಡೆದಿದ್ದಾರೆ. ನಾನು ಆ ಅರ್ಥದಲ್ಲಿ ಹೇಳಿಕೆಯನ್ನು ಕೊಟ್ಟಿಲ್ಲ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.

ಗದಗದಲ್ಲಿ (Gadag) ಮಾತನಾಡಿರುವ ಸಿಎಂ, ನಮ್ಮದು ಹೈಕಮಾಂಡ್ ಪಕ್ಷ. ನಾನು ನಿನ್ನೆ ಹೇಳಿದ್ದೇ ಬೇರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಅಂತ ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿದ್ದ ವೇಳೆಯೇ ಗುರುವಾರ ವಿಜಯನಗರದಲ್ಲಿ ಮಾತನಾಡಿದ್ದ ಸಿಎಂ, 5 ವರ್ಷ ನಮ್ಮದೇ ಸರ್ಕಾರ ಇರುತ್ತದೆ. ಈಗ ನಾನು ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತ್ರೂ ಸಿದ್ದು, ಡಿಕೆ ಮೌನ: ಭಾಷಣದಲ್ಲಿ ಡಿಕೆಶಿ ಹೆಸರನ್ನೇ ಮರೆತ ಸಿಎಂ

ಈ ಹೇಳಿಕೆ ನೀಡಿದ ಬಳಿಕ ಇಂದು ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಂದೇ ವೇದಿಕೆಯಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡಿರಲಿಲ್ಲ. ಇಬ್ಬರೂ ಕಾರ್ಯಾಕ್ರಮದ ಆರಂಭದಿಂದ ಅಂತ್ಯದವರೆಗೂ ತುಟಿ ಬಿಚ್ಚದೇ ಇದ್ದುದು ಕಂಡುಬಂದಿತ್ತು. ಕಳೆದ ದಿನದ ಸಿಎಂ ಹೇಳಿಕೆಯಿಂದ ಡಿಸಿಎಂ ಮುನಿಸಿಕೊಂಡಿರುವಂತೆ ಭಾಸವಾಗಿತ್ತು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು: ಈಶ್ವರಪ್ಪ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್