ಬೆಂಗಳೂರಿನ ಹೆಸರು ಕಳೆದುಕೊಳ್ಳಲು ಇಷ್ಟವಿಲ್ಲ- ರಾಮನಗರ ಮರುನಾಮಕರಣ ಪುನರುಚ್ಚರಿಸಿದ ಡಿಕೆಶಿ

Public TV
1 Min Read

ರಾಮನಗರ: ನಮಗೆ ಬೆಂಗಳೂರಿನ (Bengaluru) ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ ಎಂದು ರಾಮನಗರ (Ramanagara) ಜಿಲ್ಲೆಗೆ ಬೆಂಗಳೂರು ದಕ್ಷಿಣ (Bengaluru South) ಎಂಬ ಹೆಸರು ಬದಲಾವಣೆ ವಿಚಾರದ ಕುರಿತು ಬಿಡದಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಎಂಬ ಹೆಸರು ಬಂದರೆ ಇಲ್ಲಿಗೆ ಕೈಗಾರಿಕೆಗಳು ಹೆಚ್ಚು ಬರುತ್ತವೆ. ನಾವೆಲ್ಲರೂ ಬೆಂಗಳೂರಿನವರು. ನಮ್ಮ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನಮಗೆ ಬೆಂಗಳೂರಿನ ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಹೀಗಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸರ್ಕಾರದ ಮಟ್ಟದಲ್ಲಿ ಹೆಸರು ಬದಲಾವಣೆಗೆ ಕ್ರಮವಹಿಸುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ ಇನ್ನಿಲ್ಲ

ಮೆಟ್ರೋ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರವಾಗಿ ಮೆಟ್ರೋ ಸಂಸ್ಥೆಗೆ ಡಿಪಿಆರ್ ಮಾಡಲು ಹೇಳಿದ್ದೇನೆ. ಭೂಸ್ವಾಧೀನ ತಪ್ಪಿಸುವುದು, ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು, ಹೊರಗಿನಿಂದ ಬರುವವವರು ಇಲ್ಲೇ ತಮ್ಮ ವಾಹನ ನಿಲ್ಲಿಸಿ ಮೆಟ್ರೋ ಮೂಲಕ ಬೆಂಗಳೂರಿಗೆ ತೆರಳುವಂತೆ ಮಾಡಲು ಹಾಗೂ ವಾಹನ ನಿಲುಗಡೆ ಸ್ಥಳ ನಿರ್ಮಿಸುವುದು ಸೇರಿದಂತೆ ಅನೇಕ ಆಲೋಚನೆಗಳಿವೆ. ಎಲ್ಲವೂ ಪ್ಲ್ಯಾನ್ ಆಗುತ್ತಿವೆ. ಶೀಘ್ರದಲ್ಲೇ ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು‌ ಪಕ್ಷದ ಶಿಸ್ತಿನ ಸಿಪಾಯಿ, ಬೆಂಗ್ಳೂರು ಉತ್ತರಕ್ಕೆ ನನ್ನ ಪುತ್ರನಿಗೆ ಟಿಕೆಟ್ ಕೊಟ್ರೆ ಕೆಲಸ ಮಾಡ್ತೀನಿ: ಅಶೋಕ್‌

Share This Article