ಸೌಥ್‌ ಇಂಡಿಯನ್‌ ಪೇಪರ್‌ ಮಿಲ್‌ಗೆ ಬೆಂಕಿ – ಲಕ್ಷಾಂತರ ಮೌಲ್ಯದ ಪೇಪರ್‌ ಭಸ್ಮ

Public TV
1 Min Read

ಮೈಸೂರು: ಸೌಥ್‌ ಇಂಡಿಯನ್‌ (SIPM) ಪೇಪರ್‌ ಮಿಲ್‌ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ.

ಬೆಳಗಿನ ಜಾವ ಪೇಪರ್ ಮಿಲ್‌ನ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ- 6 ಗ್ಯಾರಂಟಿ ಘೋಷಿಸಿದ ತೆಲಂಗಾಣ ಕಾಂಗ್ರೆಸ್

ವಿಷಯ ತಿಳಿಯುತ್ತಿದ್ದಂತೆ 6 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ನಂಜನಗೂಡು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.

Share This Article