ಮಹಿಳೆಯಿಂದ ಬ್ಲ್ಯಾಕ್‌ಮೇಲ್ – ಎಂಪಿ ದೇವೇಂದ್ರಪ್ಪ ಪುತ್ರನಿಂದ ದೂರು, ಎಫ್‌ಐಆರ್ ದಾಖಲು

Public TV
2 Min Read

ಮೈಸೂರು: ಬಳ್ಳಾರಿ (Bellary) ಸಂಸದ ದೇವೇಂದ್ರಪ್ಪ (MP Devendrappa) ಮಗ ರಂಗನಾಥ್ (Ranganath) ಮಹಿಳೆಯ ವಿರುದ್ಧ ಬ್ಲ್ಯಾಕ್‌ಮೇಲ್ (Blackmail)ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಮೈಸೂರಿನ (Mysuru) ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಜೊತೆಗಿದ್ದ ಫೋಟೋ ಹಾಗೂ ಮಾತನಾಡಿರುವ ಆಡಿಯೋ ಇಟ್ಟುಕೊಂಡು ಮಹಿಳೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ರಂಗನಾಥ್ ಪತ್ನಿಗೆ ಫೋಟೋ ಮತ್ತು ಆಡಿಯೋ ಕಳುಹಿಸುವ ಬೆದರಿಕೆ ಹಾಕಿದ್ದು, 15 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನಿಂದ ಪ್ರೀತಿ ಹೆಸರಲ್ಲಿ ವಂಚನೆ

ಮಹಿಳೆ ಹಾಗೂ ಶ್ರೀನಿವಾಸ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಹಣಕ್ಕೆ ಬೇಡಿಕೆಯಿಟ್ಟ ಆಡಿಯೋ ನೀಡಿ ದೂರು ಸಲ್ಲಿಸಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡ್ತೀನಿ: ಪರಮೇಶ್ವರ್‌

ಏನಿದು ಪ್ರಕರಣ?
ರಂಗನಾಥ್ ಮೈಸೂರಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೂವರೆ ವರ್ಷದ ಹಿಂದೆ ಮಹಿಳೆಗೆ ಸ್ನೇಹಿತರ ಮೂಲಕ ರಂಗನಾಥ್ ಪರಿಚಯವಾಗಿದ್ದರು. ನಂತರ ಯುವತಿ ಜೊತೆ ರಂಗನಾಥ್ ಲವ್ವಿಡವ್ವಿ ಶುರು ಮಾಡಿಕೊಂಡಿದ್ದರು ಎಂದು ಯುವತಿ ಆರೋಪಿಸಿದ್ದಾರೆ. 42 ವರ್ಷದ ರಂಗನಾಥ್‌ಗೆ 24 ವರ್ಷದ ಮಹಿಳೆ ಜೊತೆ ಪ್ರೇಮ ಉಂಟಾಗಿದೆ. ಪಾರ್ಟಿ ಒಂದರಲ್ಲಿ ಮಹಿಳೆಯ ಪರಿಚಯ ಮಾಡಿಕೊಂಡ ರಂಗನಾಥ್ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಇದನ್ನೂ ಓದಿ: 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬಳಿಕ ಮಹಿಳೆ ಮದುವೆಯಾಗುವಂತೆ ರಂಗನಾಥ್ ಅವರನ್ನು ಕೇಳಿದ್ದಾರೆ. ಈ ವೇಳೆ ರಂಗನಾಥ್ ಮಹಿಳೆಯನ್ನು ಕಡೆಗಣಿಸಲು ಪ್ರಾರಂಭಿಸಿದ್ದು, ಮದುವೆ ಆಗಲ್ಲ ಏನು ಮಾಡಿಕೊಳ್ಳುತ್ತೀಯೋ ಮಾಡಿಕೋ ಎಂದಿದ್ದಾರೆ. ನಂತರ ಮಹಿಳೆ ಈ ವಿಚಾರವನ್ನು ಎಂಪಿ ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾರೆ. ಆದರೆ ದೇವೇಂದ್ರಪ್ಪ ಮಹಿಳೆಯ ವಿರುದ್ಧ ಗರಂ ಆಗಿದ್ದಾರೆ. ಬೇರೆ ದಾರಿ ಕಾಣದೆ ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ರಂಗನಾಥ್ ವಿರುದ್ಧ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

Share This Article