ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಟ – ಸ್ಥಳೀಯರಿಗೆ ಬೆದರಿಕೆ ಹಾಕುವ ದೃಶ್ಯ ಸೆರೆ

Public TV
1 Min Read

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಜನರಿಗೆ ಬೆದರಿಕೆ ಹಾಕಿರುವ ಘಟನೆ ಹುಬ್ಬಳಿಯಲ್ಲಿ (Hubballi) ನಡೆದಿದೆ. ಈತ ಹಲವು ದಿನಗಳಿಂದ ಹೀಗೆ ಕುಡಿದು ಚಾಕು ಹಿಡಿದು ಓಡಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಚಾಕು ಹಿಡಿದು ಓಡಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿನೋದ್ ನಡುಗಟ್ಟಿ ಎಂದು ಗುರುತಿಸಲಾಗಿದೆ. ಆತ ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ ಚಾಕು ಹಿಡಿದು ಓಡಾಟ ನಡೆಸಿದ್ದಾನೆ. ಅಲ್ಲದೇ ಕೆಲವರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ. ಜನರಿಗೆ ಆತ ಚಾಕು ತೋರಿಸುತ್ತಿರುವುದನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಬೈಕ್‍ನಲ್ಲಿ ಯುವತಿಯ ಅಪಹರಣ – ಸಿಸಿಟಿವಿಯಲ್ಲಿ ಕೃತ್ಯ ಸೆರೆ

ದಿನನಿತ್ಯ ಜನರಿಗೆ ತೊಂದರೆ ಕೊಡುತ್ತಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದ ಜನರ ಹಣ ಲೂಟಿ – ಕೇಂದ್ರ ಸಚಿವ ಕಿಶನ್ ರೆಡ್ಡಿ ಕಿಡಿ

Share This Article