ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಗಾಂಜಾ ಮಾರಾಟ- ಆರೋಪಿ ಅರೆಸ್ಟ್

Public TV
1 Min Read

ಕೋಲಾರ: ಕಾಲೇಜ್ ವಿದ್ಯಾರ್ಥಿಗಳನ್ನೇ (Students) ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ (Kerala) ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಮೆಡಿಕಲ್ ಕಾಲೇಜ್ ಸೇರಿದಂತೆ ಇತರ ಕಾಲೇಜ್ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರ ದುರ್ಮರಣ

ಕಾಳಹಸ್ತಿಪುರದ ಗೋಲ್ಡನ್ ಸಿಟಿ ಲೇಔಟ್‍ನಲ್ಲಿ ಆರೋಪಿ ಮನೆ ಮಾಡಿಕೊಂಡಿದ್ದ. ಬಂಧಿತನಿಂದ ಸುಮಾರು 70 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಭ್ರೂಣ ಪತ್ತೆ, ಹತ್ಯೆ ಪ್ರಕರಣ- ಆಲೆಮನೆ ಮಾಲೀಕನಿಂದ ಆಶಾ ಕಾರ್ಯಕರ್ತೆಗೆ ಬೆದರಿಕೆ

Share This Article