ಪೃಥ್ಬಿ ಅಂಬರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

Public TV
1 Min Read

ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬರ್  (Prithvi Amber)  ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ (Juni) ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ.

‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ (Vaibhav Mahadev) ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್  ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ನ ಜೂನಿ ಫಸ್ಟ್ ಲುಕ್ (First Look) ರಿಲೀಸ್ ಆಗಿದ್ದು, ಪೃಥ್ವಿ ಅಂಬಾರ್ ಜೊತೆಗೆ ನಾಯಕಿ ರಿಷಿಕಾ ನಾಯಕ್ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಜೂನಿ’ ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ನಡಿ ಮೋಹನ್ ಕುಮಾರ್ ಎಸ್ ಹಣ ಹಾಕಿದ್ದು, ಶ್ರೇಯಸ್ ವೈ ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ.

ಸದ್ದಿಲ್ಲದೇ ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮುಗಿಸಿರುವ ಜೂನಿ ಚಿತ್ರತಂಡ ಜನವರಿಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ನಕುಲ್ ಅಭ್ಯಂಕರ್ ಸಂಗೀತ, ಶಶಾಂಕ್ ನಾರಾಯಣ ಸಂಕಲನ, ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಫಸ್ಟ್ ಲುಕ್ ರಿಲೀಸ್ ಮಾಡಿರುವ ಜೂನಿ ಬಳಗ ಟೀಸರ್, ಟ್ರೇಲರ್ ಹಾಡುಗಳು ಹೀಗೆ ಒಂದೊಂದಾಗಿ ರಿಲೀಸ್ ಮಾಡಲು ಸಜ್ಜಾಗಿದೆ.

Share This Article