ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವು

Public TV
1 Min Read

ಚಿಕ್ಕಮಗಳೂರು: ಬಸ್ (Bus) ಚಾಲನೆ ಮಾಡುತ್ತಿದ್ದ ಸಂದರ್ಭ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕ (Driver) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

ರವಿ ಲಮಾಣಿ (46) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಮೂಡಿಗೆರೆ, ಗುತ್ತಿಹಳ್ಳಿ, ಹೆಸಗೋಡು ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತ ಸಂಭವಿಸಿದೆ. ಬಸ್ ಚಾಲನೆ ಮಾಡುವ ವೇಳೆ ಎದೆನೋವು ಪ್ರಾರಂಭವಾಗಿದ್ದು, ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಚಾಲಕ ರಸ್ತೆ ಮಧ್ಯೆ ಬಸ್ ನಿಲ್ಲಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಚಾಲಕ ರವಿ ಲಮಾಣಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮಾತಾ ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ನಡೀತಿತ್ತು ಭ್ರೂಣ ದಂಧೆ- ಹೆಡ್‌ನರ್ಸ್ ಉಷಾರಾಣಿ ಬಂಧನ

ರವಿ ಲಮಾಣಿ ಕೊಪ್ಪಳದ (Koppal) ಕೂಕ್ನೂರ್ ಗ್ರಾಮದ ನಿವಾಸಿಯಾಗಿದ್ದು, ಮೂಡಿಗೆರೆ ತಾಲೂಕಿನ ಹೆಸಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಟ್ರಯಲ್ ರೂಮ್‍ನಲ್ಲಿ ಯುವತಿ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‍ಮೇಲ್ – ಆರೋಪಿ ಅರೆಸ್ಟ್

Share This Article