ಸಿಂಧನೂರಿನಲ್ಲಿ ಸರಣಿ ಕಳ್ಳತನ – 60 ಮೊಬೈಲ್, ಬೈಕ್, ಲ್ಯಾಪ್‍ಟಾಪ್ ದೋಚಿದ ಕಳ್ಳರು

Public TV
1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ (Sindhanur) ಒಂದೇ ದಿನ ಮೂರು ಕಡೆ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನ ಕಳ್ಳರು ದೋಚಿದ್ದಾರೆ.

ನಗರದ ಬಸ್ ನಿಲ್ದಾಣದ ಬಳಿ ಸಲೀಂ ಎಂಬವರ ಮೊಬೈಲ್ ಅಂಗಡಿಯ ಬೀಗ ಒಡೆದು ಸುಮಾರು 5 ಲಕ್ಷ ರೂ. ಮೌಲ್ಯದ 60 ಮೊಬೈಲ್‍ಗಳನ್ನು ಕಳ್ಳತನ ಮಾಡಲಾಗಿದೆ. ಇದರಲ್ಲಿ ಕೆಲವು ಹೊಸ ಮೊಬೈಲ್ ಸೇರಿದಂತೆ ಇನ್ನು ಕೆಲವು ರಿಪೇರಿಗೆ ಬಂದಿದ್ದ ಮೊಬೈಲ್‍ಗಳು ಎಂದು ತಿಳಿದುಬಂದಿದೆ. ಇಬ್ಬರು ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಕಳ್ಳತನದ ವೇಳೆ ಸಿಸಿ ಕ್ಯಾಮೆರಾಗಳನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ವೃದ್ಧನ ಬರ್ಬರ ಹತ್ಯೆ- ದೃಶ್ಯ ಮೊಬೈಲ್‍ನಲ್ಲಿ ಸೆರೆ

ಮೊಬೈಲ್ ಅಂಗಡಿ ಅಷ್ಟೇ ಅಲ್ಲದೇ, ಅದೇ ಪ್ರದೇಶದಲ್ಲಿ ಇನ್ನೂ ಎರಡು ಕಡೆ ಕಳ್ಳತನ ಮಾಡಲಾಗಿದೆ. ಮನೆ ಒಂದರ ಕೆಳಗೆ ನಿಲ್ಲಿಸಿದ್ದ ಒಂದು ಬೈಕ್ ಹಾಗೂ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮನೆಗೆ ನುಗ್ಗಿ ಒಂದು ಲ್ಯಾಪ್‍ಟಾಪ್ ಕಳ್ಳತನ ಮಾಡಲಾಗಿದೆ. ಬಳಿಕ ಕಳ್ಳರು ಕದ್ದ ಬೈಕ್‍ನಲ್ಲೇ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ಸಂಬಂಧ ಸಿಂಧನೂರು ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

Share This Article