Mizoram Election Results: ZPMಗೆ ಮುನ್ನಡೆ – ಮಿಜೋರಾಂನಲ್ಲೂ ಕಾಂಗ್ರೆಸ್‌ಗೆ ಹಿನ್ನಡೆ

Public TV
1 Min Read

ಐಜ್ವಾಲ್: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ (Election Results) ಹೊರಬಿದ್ದಿದೆ. ಈಗ ಎಲ್ಲರ ಕಣ್ಣು ಮಿಜೋರಾಂ (Mizoram) ಮೇಲೆ ನೆಟ್ಟಿದೆ.

ಸೋಮವಾರ (ಡಿ.4) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಪ್ರಾದೇಶಿಕ ಪಕ್ಷವಾದ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಮುನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: 12 ರಾಜ್ಯಗಳಲ್ಲಿ ಬಿಜೆಪಿ ಆಡಳಿತ – 3 ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ ಅಧಿಕಾರ

ಬೆಳಗ್ಗೆ 10:30 ಗಂಟೆ ನಂತರ ಝೋರಾಮ್ ಪೀಪಲ್ಸ್ ಮೂವ್ಮೆಂಟ್ 29 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮಿಜೋ ನ್ಯಾಷನಲ್ ಫ್ರಂಟ್ (MNF) 7 ಸ್ಥಾನಗಳಲ್ಲಿ ಮುಂದುವರಿದಿದೆ. ಇನ್ನೂ ಆರಂಭಿವಾಗಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಬಳಿಕ ಹಿನ್ನಡೆ ಅನುಭವಿಸಿದೆ, ಬಿಜೆಪಿ 3 ಹಾಗೂ ಕಾಂಗ್ರೆಸ್‌ 1 ಸ್ಥಾನದಲ್ಲಿದೆ. ಇದನ್ನೂ ಓದಿ: ಮಿಜೋರಾಂ ಮತ ಎಣಿಕೆಗೆ ಕೌಂಟ್‌ ಡೌನ್‌ – ಯಾರಿಗೆ ಸಿಗುತ್ತೆ ಮ್ಯಾಜಿಕ್ ನಂಬರ್?

ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 8 ರಂದು ನಡೆದಿದ್ದ ಚುನಾವಣೆಯಲ್ಲಿ 80.43% ಮತದಾನವಾಗಿದೆ. 79.61% ಪುರುಷರು, 81.21% ಮಹಿಳೆಯರು ಮತ ಚಲಾಯಿಸಿದ್ದಾರೆ. 2018ರ ಚುನಾವಣೆಯಲ್ಲಿ 81.61% ನಷ್ಟು ಮತ ಚಲಾಯಿಸಿದ್ದರು. 8.57 ಲಕ್ಷ ಮತದಾರರನ್ನು ಒಳಗೊಂಡಿರುವ ಈ ರಾಜ್ಯದಲ್ಲಿ ಸ್ಥಳೀಯ ಪಕ್ಷಗಳಾದ ಮಿಜೋ ನ್ಯಾಷನಲ್ ಫ್ರಂಟ್ (MNF), ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ನಡುವೆ ಪೈಪೋಟಿ ನಡೆದಿದೆ. ಇನ್ನೂ ಕಾಂಗ್ರೆಸ್, ಬಿಜೆಪಿ ಈ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವುದು ಕಷ್ಟ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ. ಈಗಾಗಲೇ 4 ರಾಜ್ಯಗಳ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಿಜೋರಂನಲ್ಲಿ ಯಾರ ಪ್ರಭಾವ ಎಷ್ಟಿದೆ ಅನ್ನೋದು‌ ಪೂರ್ಣ ಫಲಿತಾಂಶದ ನಂತರ ತಿಳಿಯಲಿದೆ. ಇದನ್ನೂ ಓದಿ: 3 ರಾಜ್ಯಗಳಲ್ಲಿ ಮೋದಿ ಪಡೆಗೆ ಭರ್ಜರಿ ಗೆಲುವು – ಗ್ಯಾರಂಟಿಯಿಂದಲೇ ತೆಲಂಗಾಣದಲ್ಲಿ ಗೆದ್ದ ಕಾಂಗ್ರೆಸ್

 

Share This Article