ನೈಜೀರಿಯಾದಲ್ಲಿ ಗುರಿ ತಪ್ಪಿದ ಸೇನಾ ಡ್ರೋನ್‌ ದಾಳಿ – 85 ಮಂದಿ ನಾಗರಿಕರು ಬಲಿ

Public TV
1 Min Read

ಅಬುಜಾ: ವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್‌ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.

ಕಡುನಾ ರಾಜ್ಯದ ತುಡುನ್‌ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ಭಾಗಿ – ಖಲಿಸ್ತಾನಿ ಭಯೋತ್ಪಾದಕ ಪಾಕ್‌ನಲ್ಲಿ ಸಾವು

ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಗಾಜಾ ಸುರಂಗಗಳಲ್ಲಿ ಮಹಾ ಪ್ರವಾಹ ಸೃಷ್ಟಿಸಲು ಇಸ್ರೇಲ್‌ ಪ್ಲ್ಯಾನ್‌

ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.

ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್‌ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.

Share This Article